ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗೇಟ್ ಬಳಿ ನಡೆದಿದೆ.
ತುರುವೇಕೆರೆ ಕಡೆಯಿಂದ ಬರುತ್ತಿದ್ದ ಕಿಯಾ ಕಾರು ಹಾಗೂ ಚಿಕ್ಕನಾಯಕನಹಳ್ಳಿ ಕಡೆಯಿಂದ ಬರುತ್ತಿದ್ದ ವೋಕ್ಸ್‌ವ್ಯಾಗನ್ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಎರಡೂ ಕಾರುಗಳು ಸಂಪೂರ್ಣವಾಗಿ ಜಖಂಗೊಂಡಿವೆ.
ಅಪಘಾತದಲ್ಲಿ ಕಾರಿನಲ್ಲಿದ್ದ ಗರ್ಭಿಣಿ ಮಹಿಳೆ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ಕಾರುಗಳಿಂದ ಹೊರತೆಗೆದು ಚಿಕ್ಕನಾಯಕನಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅಪಘಾತದ ತೀವ್ರತೆಗೆ ಕಾರಿನೊಳಗೆ ಸಿಲುಕಿದ್ದವರನ್ನು ಹೊರತೆಗೆಯಲು ಸ್ಥಳೀಯರು ಹರಸಾಹಸಪಟ್ಟಿದ್ದಾರೆ. ಪ್ರಾಥಮಿಕ ಮಾಹಿತಿಯಂತೆ ವಿವೇಕ್, ಅನಿಲ್ ಹಾಗೂ ಎರಡು ವರ್ಷದ ಮಗು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಗಾಯಾಳುಗಳ ರಕ್ಷಣೆಗೆ ನೆರವಾಗಿದ್ದಾರೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…