ಮೂಡಬಿದ್ರೆ-ಬಂಟ್ವಾಳ ಲೋಕೋಪಯೋಗಿ ರಸ್ತೆಯಲ್ಲಿ ಭಾರೀ ವಾಹನಗಳ ನಿರಂತರ ಸಂಚಾರದಿಂದ ರಸ್ತೆಯಲ್ಲಿ ದೊಡ್ಡ ದೊಡ್ಡ ಹೊಂಡಗಳು ಉಂಟಾಗಿ, ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಸ್ತೆ ಕಳಪೆ ಗುಣಮಟ್ಟದ ಕಾಮಗಾರಿಯಿಂದಾಗಿ ಶೀಘ್ರದಲ್ಲೇ ಹದಗೆಟ್ಟಿರುವ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ಕಳಪೆ ಕಾಮಗಾರಿ ನಿರ್ವಹಿಸಿದವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.
ಇದೇ ವೇಳೆ, ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಯಂತ್ರಿಸುವಂತೆ ಒತ್ತಾಯಿಸಿ ಕೊಯಿಲ ಶ್ರೀ ಗುರುಗಣೇಶ ಭಜನಾ ಮಂಡಳಿ ನೇತೃತ್ವದಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಲಾಯಿತು. ಬಳಿಕ ಪಕ್ಷಾತೀತವಾಗಿ ಪೊಲೀಸ್ ಠಾಣೆಗೆ ದೂರು ಅರ್ಜಿ ಸಲ್ಲಿಸಲಾಯಿತು.
ನಿಯೋಗದಲ್ಲಿ ವಸಂತ ಕುಮಾರ್ ಅಣ್ಣಳಿಕೆ, ಜಗದೀಶ್ ಕೊಯಿಲ, ರಶ್ಮಿತ್ ಶೆಟ್ಟಿ, ಸಂತೋಷ್ ರಾಯಿ ಬೆಟ್ಟು ಸೇರಿದಂತೆ ಕೊಯಿಲ ಗ್ರಾಮದ ಸಾರ್ವಜನಿಕರು ಉಪಸ್ಥಿತರಿದ್ದರು.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…