ಜನ ಮನದ ನಾಡಿ ಮಿಡಿತ

Advertisement

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ.3, 4, 6, 7ರಂದು ಸರ್ಪಸಂಸ್ಕಾರ ಸೇವೆ ಇಲ್ಲ

ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ದಶಮಿ-ಏಕಾದಶಿ ಪ್ರಯುಕ್ತ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆಪ್ಟೆಂಬರ್ 3, 4, 6 ಮತ್ತು 7ರಂದು ಸರ್ಪಸಂಸ್ಕಾರ ಸೇವೆ ನಡೆಯುವುದಿಲ್ಲ ಎಂದು ದೇವಳದ ಪ್ರಕಟಣೆ ತಿಳಿಸಿದೆ.

ಸೆಪ್ಟೆಂಬರ್ 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಸೆಪ್ಟೆಂಬರ್ 7ರಂದು ಏಕಾದಶಿ ದಿನವಾಗಿರುವ ಹಿನ್ನೆಲೆಯಲ್ಲಿ ಈ ಎರಡೂ ದಿನಗಳಲ್ಲಿ ಆಶ್ಲೇಷ ಬಲಿ, ನಾಗಪ್ರತಿಷ್ಠೆ ಮತ್ತು ಮಹಾಭಿಷೇಕ ಸೇವೆಗಳೂ ನಡೆಯುವುದಿಲ್ಲ ಎಂದು ತಿಳಿಸಲಾಗಿದೆ.

ಆದರೆ ಮಹಾಪೂಜೆ, ಶೇಷಸೇವೆ, ಅಭಿಷೇಕ, ಅರ್ಚನೆ ಸೇರಿದಂತೆ ಇತರ ಸೇವೆಗಳು ಹಾಗೂ ಶ್ರೀ ದೇವರ ದರುಶನ ಎಂದಿನಂತೆ ನಡೆಯಲಿದೆ.

ಭಕ್ತಾದಿಗಳು ದೇವಳದ ಪ್ರಕಟಣೆಯನ್ನು ಗಮನಿಸಿ, ಅಗತ್ಯ ಸಹಕಾರ ನೀಡುವಂತೆ ದೇವಸ್ಥಾನದ ಆಡಳಿತ ಮಂಡಳಿ ಮನವಿ ಮಾಡಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!