ಜನ ಮನದ ನಾಡಿ ಮಿಡಿತ

Advertisement

ಉಡುಪಿ: ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ಖಂಡಿಸಿ ಉಡುಪಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಉತ್ತರಾಖಂಡದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಡೆದ ರ‍್ಯಾಲಿಯ ಬಳಿಕ ಬಿಜೆಪಿ ಕಾರ್ಯಕರ್ತರು ನಡೆಸಿದ ಶುದ್ಧೀಕರಣದಂತಹ ಜಾತಿವಾದಿ ಕೃತ್ಯವನ್ನು ಖಂಡಿಸಿ ಧ್ವನಿ ಎತ್ತಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಯಿತು.

ಬ್ರಹ್ಮಗಿರಿ ಸರ್ಕಲ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದರು. ಇದಕ್ಕೂ ಮುನ್ನ ಕಾಂಗ್ರೆಸ್ ಭವನದಿಂದ ಬ್ರಹ್ಮಗಿರಿ ಸರ್ಕಲ್‌ವರೆಗೆ ಪಾದಯಾತ್ರೆ ನಡೆಸಲಾಯಿತು.

ಸಂವಿಧಾನದ ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಭಾತೃತ್ವದ ಮೌಲ್ಯಗಳನ್ನು ರಕ್ಷಿಸುವಂತೆ ಆಗ್ರಹಿಸಿದ ಪ್ರತಿಭಟನಾಕಾರರು, ಉತ್ತರಾಖಂಡ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಹುಲ್ ಗಾಂಧಿ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಅನ್ನು ಕೂಡಲೇ ರದ್ದುಗೊಳಿಸುವಂತೆ ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಜಾತಿವಾದ ಮತ್ತು ಅಸ್ಪೃಶ್ಯತೆಯ ವಿರುದ್ಧ ಧ್ವನಿ ಎತ್ತಿದ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆ ತರುವ ಕ್ರಮವಾಗಿದೆ ಎಂದು ಆರೋಪಿಸಿದರು.

ಕೇಂದ್ರ ಹಾಗೂ ಉತ್ತರಾಖಂಡ ಸರ್ಕಾರದ ನಡೆ ಖಂಡನೀಯವಾಗಿದ್ದು, ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್ ಅನ್ನು ಕೂಡಲೇ ರದ್ದುಪಡಿಸಬೇಕು ಎಂದು ಅವರು ಆಗ್ರಹಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!