ಉತ್ತರಾಖಂಡದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಡೆದ ರ‍್ಯಾಲಿಯ ಬಳಿಕ ಬಿಜೆಪಿ ಕಾರ್ಯಕರ್ತರು ನಡೆಸಿದ ಶುದ್ಧೀಕರಣದಂತಹ ಜಾತಿವಾದಿ ಕೃತ್ಯವನ್ನು ಖಂಡಿಸಿ ಧ್ವನಿ ಎತ್ತಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಯಿತು.
ಬ್ರಹ್ಮಗಿರಿ ಸರ್ಕಲ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದರು. ಇದಕ್ಕೂ ಮುನ್ನ ಕಾಂಗ್ರೆಸ್ ಭವನದಿಂದ ಬ್ರಹ್ಮಗಿರಿ ಸರ್ಕಲ್‌ವರೆಗೆ ಪಾದಯಾತ್ರೆ ನಡೆಸಲಾಯಿತು.
ಸಂವಿಧಾನದ ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಭಾತೃತ್ವದ ಮೌಲ್ಯಗಳನ್ನು ರಕ್ಷಿಸುವಂತೆ ಆಗ್ರಹಿಸಿದ ಪ್ರತಿಭಟನಾಕಾರರು, ಉತ್ತರಾಖಂಡ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಹುಲ್ ಗಾಂಧಿ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಅನ್ನು ಕೂಡಲೇ ರದ್ದುಗೊಳಿಸುವಂತೆ ಒತ್ತಾಯಿಸಿದರು.
ಈ ವೇಳೆ ಮಾತನಾಡಿದ ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಜಾತಿವಾದ ಮತ್ತು ಅಸ್ಪೃಶ್ಯತೆಯ ವಿರುದ್ಧ ಧ್ವನಿ ಎತ್ತಿದ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆ ತರುವ ಕ್ರಮವಾಗಿದೆ ಎಂದು ಆರೋಪಿಸಿದರು.
ಕೇಂದ್ರ ಹಾಗೂ ಉತ್ತರಾಖಂಡ ಸರ್ಕಾರದ ನಡೆ ಖಂಡನೀಯವಾಗಿದ್ದು, ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್ ಅನ್ನು ಕೂಡಲೇ ರದ್ದುಪಡಿಸಬೇಕು ಎಂದು ಅವರು ಆಗ್ರಹಿಸಿದರು.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…