ಕಲ್ಲಪಳ್ಳಿಯಲ್ಲಿ ಚಿರತೆಯೊಂದು ಅನುಮಾನಾಸ್ಪದವಾಗಿ ಸಾವಿಗೀಡಾದ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಕಲ್ಲಪಳ್ಳಿ ಪ್ರದೇಶದ ಪೆರುಮುಂಡ ಗೋಪಾಲ ಗೌಡ ಎಂಬವರ ಜಾಗದಲ್ಲಿ ಚಿರತೆ ಸತ್ತು ಬಿದ್ದಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಬೇಟೆಯಾಡುವ ವೇಳೆ ಯಾವುದೋ ಪ್ರಾಣಿಯನ್ನು ಅಟ್ಟಿಸಿಕೊಂಡು ಬರುವಾಗ ಆಕಸ್ಮಿಕವಾಗಿ ಬಿದ್ದು ಚಿರತೆ ಮೃತಪಟ್ಟಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಪ್ರಾಥಮಿಕವಾಗಿ ಅಂದಾಜಿಸಿದ್ದಾರೆ.
ಘಟನಾ ಸ್ಥಳಕ್ಕೆ ಆಗಮಿಸಿದ ಪಶುವೈದ್ಯರು ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಆಧರಿಸಿ ಅರಣ್ಯ ಇಲಾಖೆ ಮುಂದಿನ ಕ್ರಮ ಕೈಗೊಳ್ಳಲಿದೆ.



