ಜನ ಮನದ ನಾಡಿ ಮಿಡಿತ

Advertisement

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್: ಯಕ್ಷ ಕ್ರಾಂತಿಯ ಯೋಜನೆ “ಯಕ್ಷ ಧ್ರುವ” ಯಕ್ಷ ಶಿಕ್ಷಣದ ಶುಭಾರಂಭ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು

ಯಕ್ಷ ಕ್ರಾಂತಿಯ ಯೋಜನೆ ಯಕ್ಷ ಧ್ರುವ ಯಕ್ಷ ಶಿಕ್ಷಣ ದ ಶುಭಾರಂಭ.

ಪಟ್ಲ ಫೌಂಡೇಶನ್ ಯಕ್ಷಗಾನವನ್ನು ಉಳಿಸಿ ಬೆಳೆಸುವತ್ತ ಮಹತ್ತರ ಹೆಜ್ಜೆಗಳನ್ನು ಈಗಾಗಲೇ ಹಮ್ಮಿಕೊಂಡು ಅವುಗಳನ್ನು ಕಾರ್ಯಗತಗೊಳಿಸಿರುತ್ತದೆ.

ಪ್ರಸ್ತುತ ಆಧುನಿಕ ವೈಜ್ಞಾನಿಕ ಕಂಪ್ಯೂಟರೀಕರಣದ ಈ ಕಾಲಘಟ್ಟದಲ್ಲಿ ಸಂಪ್ರದಾಯಕವಾದ ಯಕ್ಷಗಾನವನ್ನು ಮುಂದಿನ ಪೀಳಿಗೆಗೆ ಕಲಿಸಿ ಬೆಳೆಸುವ ಸದುದ್ದೇಶದಿಂದ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಯಕ್ಷ ಶಿಕ್ಷಣ ಎಂಬ ಪ್ರಯೋಗಕ್ಕೆ ಚಾಲನೆ ನೀಡಲು ಯಕ್ಷಧ್ರುವ ಪಟ್ಲ ಫೌಂಡೇಶನ್ ಸಿದ್ಧವಾಗಿದೆ.

ಆ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ ಪ್ರೌಢ ಶಾಲೆಗಳಲ್ಲಿ ಉಚಿತವಾಗಿ ಫೌಂಡೇಶನಿನ ಮೂಲಕ ವಿದ್ಯಾರ್ಥಿಗಳಿಗೆ ಯಕ್ಷ ಶಿಕ್ಷಣ ನೀಡುವುದಾಗಿ ತೀರ್ಮಾನಿಸಿ ಸಂಬಂಧಪಟ್ಟ ಇಲಾಖೆಗಳ ಅನುಮತಿಯನ್ನು ಪಡೆಯಲಾಗಿದೆ.

ಇಲಾಖಾ ಅಧಿಕಾರಿಗಳ ಉತ್ತಮ ಸ್ಪಂದನೆ ದೊರತ ಹಿನ್ನಲೆಯಲ್ಲಿ ಆಗಸ್ಟ್ 3 ನೇ ತಾರೀಖು ಗುರುವಾರ ಬೆಳಿಗ್ಗೆ 10-30 ಕ್ಕೆ ಸರಿಯಾಗಿ ಸರಳರೂಪದ ಉದ್ಘಾಟನಾ ಸಮಾರಂಭವು ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಮ್ಮಾಜೆ, ಕಿನ್ನಿಗೋಳಿ ಇಲ್ಲಿ ನೆರವೇರಲಿದೆ.

ಪಟ್ಲ ಫೌಂಡೇಶನ್ ವತಿಯಿಂದ ಈಗಾಗಲೇ ಈ ಸದುದ್ದೇಶದ ಯೋಜನೆಗೆ 30 ಪ್ರಸಿದ್ಧ ಯುವ ಯಕ್ಷ ಗುರುಗಳನ್ನು ನೇಮಕ ಮಾಡಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!