ಜನ ಮನದ ನಾಡಿ ಮಿಡಿತ

Advertisement

ಕಡಬ: ಟ್ಯಾಂಕರ್‌ಗಳಿಂದ ಡೀಸೆಲ್ ಕಳವುಗೆ ಯತ್ನ: ಇಬ್ಬರು ವಶಕ್ಕೆ, ಓರ್ವ ಪರಾರಿ..!

ಹೆದ್ದಾರಿ ಬದಿ ನಿಲ್ಲಿಸಿದ್ದ ಟ್ಯಾಂಕರ್‌ಗಳ ಡೀಸೆಲ್ ಟ್ಯಾಂಕ್‌ನಿಂದ ಡೀಸೆಲ್ ಕಳವು ಮಾಡಲು ಸಿದ್ಧತೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃತ್ಯಕ್ಕೆ ಬಳಸಲಾಗಿದೆ ಎನ್ನಲಾದ ಪಿಕಪ್ ವಾಹನ, ಡೀಸೆಲ್ ಹಾಗೂ ಇತರ ಪರಿಕರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಅಲಂಪಾಡಿ ಕ್ರಾಸ್ ಬಳಿ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಈ ಘಟನೆ ನಡೆದಿದೆ.

ಬಂಧಿತರನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ತೊಪ್ಪನಹಳ್ಳಿ ಗ್ರಾಮದ ಕೆ. ಹೊನ್ನಲೆಗೆರೆ ಹೋಬಳಿಯ ಜೈಮುತ್ತಾ ಹಾಗೂ ಮುತ್ತು ಎಂದು ಗುರುತಿಸಲಾಗಿದೆ. ಮತ್ತೋರ್ವ ಆರೋಪಿ ಮಹಾದೇವ ಟಿ.ಕೆ. ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಉಪ್ಪಿನಂಗಡಿ ಪೊಲೀಸ್ ಠಾಣೆಯ ಹೊರಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಅಲಂಪಾಡಿ ಕ್ರಾಸ್ ಬಳಿ ಹೆದ್ದಾರಿ ಬದಿಯಲ್ಲಿ ಟ್ಯಾಂಕರ್ ಹಾಗೂ ಪಿಕಪ್ ವಾಹನ ಅನುಮಾನಾಸ್ಪದವಾಗಿ ನಿಂತಿರುವುದನ್ನು ಗಮನಿಸಿದ್ದಾರೆ.

ವಾಹನದ ಸಮೀಪ ಮೂವರು ಮುಖ ಮುಚ್ಚಿಕೊಂಡು ನಿಂತಿರುವುದನ್ನು ಕಂಡ ಪೊಲೀಸರು ವಿಚಾರಣೆ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಡೀಸೆಲ್ ಕಳವುಗೆ ಸಿದ್ಧತೆ ನಡೆಸುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ.

ಬಳಿಕ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು, ಪಿಕಪ್ ವಾಹನ ಸೇರಿದಂತೆ ಡೀಸೆಲ್ ಹಾಗೂ ಕೃತ್ಯಕ್ಕೆ ಬಳಸಲಾಗಿದೆ ಎನ್ನಲಾದ ಇತರ ಪರಿಕರಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಪರಾರಿಯಾಗಿರುವ ಆರೋಪಿ ಮಹಾದೇವ ಟಿ.ಕೆ.ಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!