ಹೆದ್ದಾರಿ ಬದಿ ನಿಲ್ಲಿಸಿದ್ದ ಟ್ಯಾಂಕರ್‌ಗಳ ಡೀಸೆಲ್ ಟ್ಯಾಂಕ್‌ನಿಂದ ಡೀಸೆಲ್ ಕಳವು ಮಾಡಲು ಸಿದ್ಧತೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃತ್ಯಕ್ಕೆ ಬಳಸಲಾಗಿದೆ ಎನ್ನಲಾದ ಪಿಕಪ್ ವಾಹನ, ಡೀಸೆಲ್ ಹಾಗೂ ಇತರ ಪರಿಕರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಅಲಂಪಾಡಿ ಕ್ರಾಸ್ ಬಳಿ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಈ ಘಟನೆ ನಡೆದಿದೆ.
ಬಂಧಿತರನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ತೊಪ್ಪನಹಳ್ಳಿ ಗ್ರಾಮದ ಕೆ. ಹೊನ್ನಲೆಗೆರೆ ಹೋಬಳಿಯ ಜೈಮುತ್ತಾ ಹಾಗೂ ಮುತ್ತು ಎಂದು ಗುರುತಿಸಲಾಗಿದೆ. ಮತ್ತೋರ್ವ ಆರೋಪಿ ಮಹಾದೇವ ಟಿ.ಕೆ. ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಉಪ್ಪಿನಂಗಡಿ ಪೊಲೀಸ್ ಠಾಣೆಯ ಹೊರಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಅಲಂಪಾಡಿ ಕ್ರಾಸ್ ಬಳಿ ಹೆದ್ದಾರಿ ಬದಿಯಲ್ಲಿ ಟ್ಯಾಂಕರ್ ಹಾಗೂ ಪಿಕಪ್ ವಾಹನ ಅನುಮಾನಾಸ್ಪದವಾಗಿ ನಿಂತಿರುವುದನ್ನು ಗಮನಿಸಿದ್ದಾರೆ.
ವಾಹನದ ಸಮೀಪ ಮೂವರು ಮುಖ ಮುಚ್ಚಿಕೊಂಡು ನಿಂತಿರುವುದನ್ನು ಕಂಡ ಪೊಲೀಸರು ವಿಚಾರಣೆ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಡೀಸೆಲ್ ಕಳವುಗೆ ಸಿದ್ಧತೆ ನಡೆಸುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ.
ಬಳಿಕ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು, ಪಿಕಪ್ ವಾಹನ ಸೇರಿದಂತೆ ಡೀಸೆಲ್ ಹಾಗೂ ಕೃತ್ಯಕ್ಕೆ ಬಳಸಲಾಗಿದೆ ಎನ್ನಲಾದ ಇತರ ಪರಿಕರಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಪರಾರಿಯಾಗಿರುವ ಆರೋಪಿ ಮಹಾದೇವ ಟಿ.ಕೆ.ಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…