ಪಾಣೆಮಂಗಳೂರಿನ ಕೆನರಾ ಬ್ಯಾಂಕ್ ಎದುರಿನ ಮುಖ್ಯ ರಸ್ತೆಯಲ್ಲಿ ಒಳಚರಂಡಿ ನೀರು ರಸ್ತೆಯಲ್ಲೇ ಹರಿದು ಕೆರೆಯಂತಾಗಿದ್ದು, ಸಾರ್ವಜನಿಕರು, ವಾಹನ ಸವಾರರು ಹಾಗೂ ಶಾಲಾ ಮಕ್ಕಳು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ಮಳೆ ಬಂದಾಗ ಮಾತ್ರವಲ್ಲದೆ, ಮಳೆ ಇಲ್ಲದ ಸಂದರ್ಭದಲ್ಲೂ ಈ ಭಾಗದಲ್ಲಿ ಕೊಳಚೆ ನೀರು ರಸ್ತೆಯಲ್ಲಿ ನಿಂತುಕೊಳ್ಳುತ್ತಿರುವುದು ಸಮಸ್ಯೆಯ ಗಂಭೀರತೆಯನ್ನು ತೋರಿಸುತ್ತಿದೆ. ನಿರಂತರವಾಗಿ ನೀರು ನಿಂತಿರುವುದರಿಂದ ವಾಹನ ಸಂಚಾರಕ್ಕೂ ಅಡಚಣೆಯಾಗುತ್ತಿದ್ದು, ದ್ವಿಚಕ್ರ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ರಸ್ತೆಯಲ್ಲಿ ಶಾಲಾ ಮಕ್ಕಳು ಸೇರಿದಂತೆ ಪ್ರತಿದಿನ ನೂರಾರು ಮಂದಿ ಸಂಚರಿಸುತ್ತಾರೆ. ಆದರೆ ರಸ್ತೆಯ ಮೇಲೆ ಕೊಳಚೆ ನೀರು ನಿಂತಿರುವುದರಿಂದ ಮಕ್ಕಳು ಕಾಲ್ನಡಿಗೆಯಲ್ಲಿ ತೆರಳಲು ಪರದಾಡುವಂತಾಗಿದೆ.
ಇನ್ನು ವಾಹನಗಳು ಸಂಚರಿಸುವ ವೇಳೆ ರಸ್ತೆಯಲ್ಲಿ ನಿಂತಿರುವ ಕೊಳಚೆ ನೀರು ಬದಿಯಲ್ಲಿ ನಡೆದುಕೊಂಡು ಹೋಗುವವರ ಮೇಲೆ ಸಿಡಿಯುತ್ತಿದ್ದು, ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ ಒಳಚರಂಡಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ರಸ್ತೆಯಲ್ಲಿ ನೀರು ನಿಲ್ಲದಂತೆ ಸೂಕ್ತ ವ್ಯವಸ್ಥೆ ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…