ಕೇರಳದ ತ್ರಿಶೂರ್ ಜಿಲ್ಲೆಯ ಕೈಪಮಂಗಲಂನಲ್ಲಿ ನಿರ್ಮಾಣ ಹಂತದಲ್ಲಿರುವ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ತಮಿಳುನಾಡಿನ ಎಂಟು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ಪನಂಬಿಕ್ಕುನ್ನು ಸೆಂಟರ್ ಬಳಿ ನಿಂತಿದ್ದ ಸರಕು ಸಾಗಣೆ ಲಾರಿಯ ಹಿಂಭಾಗಕ್ಕೆ ತಮಿಳುನಾಡು ನೋಂದಣಿಯ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಲಾರಿಯ ಕೆಳಗೆ ಸಿಲುಕಿಕೊಂಡಿತ್ತು.
ಮೃತರು ದಿಂಡಿಗಲ್‌ನ ಪಿಎಸ್‌ಎನ್‌ಎ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಕೇರಳ ಪ್ರವಾಸಕ್ಕೆ ತೆರಳಿದ್ದರು ಎನ್ನಲಾಗಿದೆ. ಮೃತರನ್ನು ವಿಶ್ವ, ಸೂರ್ಯ, ಸಂಜಿತ್, ಸಂತೋಷ್ ಹಾಗೂ ಪ್ರಸನ್ನ ಎಂದು ಗುರುತಿಸಲಾಗಿದ್ದು, ಉಳಿದ ಮೂವರ ಗುರುತು ಪತ್ತೆ ಕಾರ್ಯ ಮುಂದುವರಿದಿದೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಕಾರನ್ನು ಕತ್ತರಿಸಿ ಮೃತದೇಹಗಳನ್ನು ಹೊರತೆಗೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ನಿರ್ಮಾಣ ಹಂತದಲ್ಲಿರುವ ರಸ್ತೆಯಲ್ಲಿ ಸೂಕ್ತ ಬೆಳಕಿನ ವ್ಯವಸ್ಥೆ ಹಾಗೂ ಎಚ್ಚರಿಕೆ ಫಲಕಗಳ ಕೊರತೆಯೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನೆಗೆ ನಿಖರ ಕಾರಣ ಪತ್ತೆಹಚ್ಚಲು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ತನಿಖೆ ಮುಂದುವರಿದಿದೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…