ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಉಡುಪಿಯಲ್ಲಿ ಕೃಷ್ಣಾರ್ಘ್ಯ ಪ್ರದಾನ: ಸಾವಿರಾರು ಭಕ್ತರ ಸಮ್ಮುಖದಲ್ಲಿ ನೆರವೇರಿದ ಧಾರ್ಮಿಕ ವಿಧಿ

ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮದ ಪ್ರಮುಖ ಧಾರ್ಮಿಕ ವಿಧಿಯಾದ ಅರ್ಘ್ಯ ಪ್ರದಾನವು ಉಡುಪಿಯ ಶ್ರೀಕೃಷ್ಣ ಮಠದಲ್ಲಿ ತಡರಾತ್ರಿ ಭಕ್ತಿಪೂರ್ವಕವಾಗಿ ನೆರವೇರಿತು.

ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆದ ಕೃಷ್ಣಾರ್ಘ್ಯ ಪ್ರದಾನವು ಶ್ರೀಕೃಷ್ಣ ಮಠದ ಪರಿಸರದಲ್ಲಿ ವಿಶೇಷ ಭಕ್ತಿಯ ವಾತಾವರಣವನ್ನು ಸೃಷ್ಟಿಸಿತು. ಪರ್ಯಾಯ ಶ್ರೀ ಶೀರೂರು ಮಠದ ಪರ್ಯಾಯ ಪೀಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಹಾಗೂ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಶ್ರೀಕೃಷ್ಣನಿಗೆ ವಿಶೇಷ ಅರ್ಘ್ಯ ಸಮರ್ಪಿಸಿದರು.

ಬಳಿಕ ನೂರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ಶ್ರೀಕೃಷ್ಣನಿಗೆ ಅರ್ಘ್ಯ ಸಮರ್ಪಿಸಿ ಧಾರ್ಮಿಕ ವಿಧಿಯಲ್ಲಿ ಪಾಲ್ಗೊಂಡರು. ಕೃಷ್ಣಾರ್ಘ್ಯ ಪ್ರದಾನದ ವೇಳೆ ಶ್ರೀಕೃಷ್ಣ ಮಠದ ಪರಿಸರ ಭಕ್ತರಿಂದ ಕಿಕ್ಕಿರಿದು ತುಂಬಿತ್ತು.

ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆಯಿಂದ ಸಾವಿರಾರು ಭಕ್ತರು ದಿನವಿಡೀ ಉಡುಪಿಗೆ ಆಗಮಿಸಿದ್ದರು. ಭಕ್ತರು ಶ್ರೀಕೃಷ್ಣನ ದರ್ಶನ ಪಡೆದು, ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಜನ್ಮಾಷ್ಟಮಿ ಸಂಭ್ರಮವನ್ನು ಆಚರಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!