ಜನ ಮನದ ನಾಡಿ ಮಿಡಿತ

Advertisement

ದುಬೈ: ದುಬೈನಲ್ಲಿ ಪದ್ಮಶಾಲಿ ಸಮುದಾಯದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ…!

ದುಬೈ ಪದ್ಮಶಾಲಿ ಸಮುದಾಯದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯನ್ನು ಭಕ್ತಿ, ಸಡಗರ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು.

ನಗರದ ಫಾರ್ಚೂನ್ ಪ್ಲಾಜಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮುದಾಯದ ಸದಸ್ಯರು, ಮಕ್ಕಳು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಬೆಳಗ್ಗೆ 9 ಗಂಟೆಗೆ ಪೂಜಾ ವಿಧಿವಿಧಾನಗಳೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಸಂಘದ ಭಜನಾ ಮಂಡಳಿಯ ವತಿಯಿಂದ ಭಜನೆ ಹಾಗೂ ಕೀರ್ತನೆಗಳು ನಡೆದವು.

ಕಾರ್ಯಕ್ರಮದ ಅಂಗವಾಗಿ ಪ್ರವಚನ ಗುರು ಶ್ರೀ ಭಗವಾನ್ ಗೋವಿಂದ ದಾಸ್ ಪ್ರಭು ಅವರು ‘ಬಿಯಾಂಡ್ ದ ಯುನಿವರ್ಸ್: ಡಿಸ್ಕವರಿಂಗ್ ಕೃಷ್ಣ ದಿ ಸುಪ್ರೀಂ’ ವಿಷಯದ ಕುರಿತು ಪ್ರವಚನ ನೀಡಿದರು.

ಭೌತಿಕ ಜಗತ್ತಿನ ಆಚೆ ಇರುವ ಶಾಶ್ವತ ಆಧ್ಯಾತ್ಮಿಕ ಸತ್ಯ, ಜೀವನದ ಉದ್ದೇಶ ಹಾಗೂ ಶ್ರೀಕೃಷ್ಣನನ್ನು ಅರಿತು ಆಧ್ಯಾತ್ಮಿಕವಾಗಿ ಅವರೊಂದಿಗೆ ಸಂಪರ್ಕ ಬೆಳೆಸುವ ಮಹತ್ವವನ್ನು ಅವರು ಪ್ರವಚನದಲ್ಲಿ ವಿವರಿಸಿದರು.

ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ನಡೆದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದಿದ್ದವರ ಗಮನ ಸೆಳೆದವು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!