ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ದಲಿತ ಸಂಘಟನೆಗಳ ಎಚ್ಚರಿಕೆ…!

ಪರಿಶಿಷ್ಟ ಸಮುದಾಯಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೀಸಲಿಟ್ಟಿರುವ ಡಿಸಿ ಮನ್ನಾ ಭೂಮಿಯ ಹಂಚಿಕೆ ಕುರಿತು ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ನಿರ್ಣಯ ಕೈಗೊಳ್ಳಬೇಕು ಎಂದು ದಲಿತ ಸಂಘಟನೆಗಳು ಆಗ್ರಹಿಸಿವೆ.

ತಿಂಗಳೊಳಗೆ ಭೂಮಿ ಹಂಚಿಕೆಗೆ ಕ್ರಮ ಕೈಗೊಳ್ಳದಿದ್ದರೆ ಹಂತ ಹಂತವಾಗಿ ಉಗ್ರ ಹೋರಾಟ ನಡೆಸುವುದಾಗಿ ದಲಿತ ಸಂಘಟನೆಗಳ ನಾಯಕರು ಎಚ್ಚರಿಕೆ ನೀಡಿದ್ದಾರೆ.

ಮಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಪ್ರಧಾನ ಸಂಚಾಲಕ ರಮೇಶ್ ಕೋಟ್ಯಾನ್, ಡಿಸಿ ಮನ್ನಾ ಭೂಮಿ ಹಂಚಿಕೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತವು 2017ರಲ್ಲೇ ಸರ್ಕಾರಕ್ಕೆ ಕರಡು ನಿಯಮಾವಳಿಗಳನ್ನು ಕಳುಹಿಸಿತ್ತು ಎಂದು ತಿಳಿಸಿದರು.

ಆದರೆ, ಇದುವರೆಗೆ ಭೂ ಮಂಜೂರಾತಿ ನಿಯಮಾವಳಿಗಳಿಗೆ ತಿದ್ದುಪಡಿ ತಂದು ಅರ್ಹ ಫಲಾನುಭವಿಗಳಿಗೆ ಭೂಮಿ ಹಂಚಿಕೆ ಮಾಡಲು ಸರ್ಕಾರ ಮುಂದಾಗಿಲ್ಲ ಎಂದು ಅವರು ಆರೋಪಿಸಿದರು.

ಅರ್ಹ ಫಲಾನುಭವಿಗಳಿಗೆ ಶೀಘ್ರವೇ ಡಿಸಿ ಮನ್ನಾ ಭೂಮಿ ಮಂಜೂರು ಮಾಡಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ದಲಿತ ಸಂಘಟನೆಗಳ ನಾಯಕರು ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!