ಪರಿಶಿಷ್ಟ ಸಮುದಾಯಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೀಸಲಿಟ್ಟಿರುವ ಡಿಸಿ ಮನ್ನಾ ಭೂಮಿಯ ಹಂಚಿಕೆ ಕುರಿತು ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ನಿರ್ಣಯ ಕೈಗೊಳ್ಳಬೇಕು ಎಂದು ದಲಿತ ಸಂಘಟನೆಗಳು ಆಗ್ರಹಿಸಿವೆ.
ತಿಂಗಳೊಳಗೆ ಭೂಮಿ ಹಂಚಿಕೆಗೆ ಕ್ರಮ ಕೈಗೊಳ್ಳದಿದ್ದರೆ ಹಂತ ಹಂತವಾಗಿ ಉಗ್ರ ಹೋರಾಟ ನಡೆಸುವುದಾಗಿ ದಲಿತ ಸಂಘಟನೆಗಳ ನಾಯಕರು ಎಚ್ಚರಿಕೆ ನೀಡಿದ್ದಾರೆ.
ಮಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಪ್ರಧಾನ ಸಂಚಾಲಕ ರಮೇಶ್ ಕೋಟ್ಯಾನ್, ಡಿಸಿ ಮನ್ನಾ ಭೂಮಿ ಹಂಚಿಕೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತವು 2017ರಲ್ಲೇ ಸರ್ಕಾರಕ್ಕೆ ಕರಡು ನಿಯಮಾವಳಿಗಳನ್ನು ಕಳುಹಿಸಿತ್ತು ಎಂದು ತಿಳಿಸಿದರು.
ಆದರೆ, ಇದುವರೆಗೆ ಭೂ ಮಂಜೂರಾತಿ ನಿಯಮಾವಳಿಗಳಿಗೆ ತಿದ್ದುಪಡಿ ತಂದು ಅರ್ಹ ಫಲಾನುಭವಿಗಳಿಗೆ ಭೂಮಿ ಹಂಚಿಕೆ ಮಾಡಲು ಸರ್ಕಾರ ಮುಂದಾಗಿಲ್ಲ ಎಂದು ಅವರು ಆರೋಪಿಸಿದರು.
ಅರ್ಹ ಫಲಾನುಭವಿಗಳಿಗೆ ಶೀಘ್ರವೇ ಡಿಸಿ ಮನ್ನಾ ಭೂಮಿ ಮಂಜೂರು ಮಾಡಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ದಲಿತ ಸಂಘಟನೆಗಳ ನಾಯಕರು ಎಚ್ಚರಿಕೆ ನೀಡಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…