ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸಬೇಕು, ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸಬೇಕು ಹಾಗೂ ಜಯದೇವ ಹೃದ್ರೋಗ ಆಸ್ಪತ್ರೆ ಮತ್ತು ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಗಳ ಘಟಕಗಳ ಸರಕಾರಿ ಸೇವೆಯನ್ನು ತಕ್ಷಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರಂಭಿಸಬೇಕು ಎಂದು ಒತ್ತಾಯಿಸಿ ಮಂಗಳೂರಿನ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐಎಂ ರಾಜ್ಯ ಸಮಿತಿ ಸದಸ್ಯ ಸುನಿಲ್ ಕುಮಾರ್ ಬಜಾಲ್, ಖಾಸಗಿ ಆಸ್ಪತ್ರೆಗಳೊಂದಿಗೆ ಕರಾರು ಒಪ್ಪಂದ ಮಾಡಿಕೊಂಡಿರುವ ಕರ್ನಾಟಕ ರಾಜ್ಯ ಸರ್ಕಾರದ ನಡೆಯನ್ನು ಕಟುವಾಗಿ ಟೀಕಿಸಿದರು.
ಸರಕಾರಿ ಆಸ್ಪತ್ರೆಗಳನ್ನು ದುರ್ಬಲಗೊಳಿಸಿ ಖಾಸಗಿ ಆಸ್ಪತ್ರೆಗಳಿಗೆ ಲಾಭ ಮಾಡಿಕೊಡುವ ಉದ್ದೇಶ ಸರ್ಕಾರದ ಈ ನಿರ್ಧಾರದ ಹಿಂದೆ ಅಡಗಿದೆ ಎಂದು ಅವರು ಆರೋಪಿಸಿದರು.
ಆರೋಗ್ಯ ಇಲಾಖೆಯು ಖಾಸಗಿ ಆಸ್ಪತ್ರೆಗಳೊಂದಿಗೆ ಮಾಡಿಕೊಂಡಿರುವ ಒಪ್ಪಂದವನ್ನು ಕೂಡಲೇ ರದ್ದುಗೊಳಿಸಿ, ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸಲು ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಜಯದೇವ ಹಾಗೂ ಕಿದ್ವಾಯಿ ಆಸ್ಪತ್ರೆಗಳ ಘಟಕಗಳನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಆರಂಭಿಸುವ ಮೂಲಕ ಜಿಲ್ಲೆಯ ಜನರಿಗೆ ಗುಣಮಟ್ಟದ ಸರಕಾರಿ ಆರೋಗ್ಯ ಸೇವೆ ಲಭ್ಯವಾಗುವಂತೆ ಮಾಡಬೇಕು ಎಂದು ಒತ್ತಾಯಿಸಲಾಯಿತು.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…