ಬಂಟ್ವಾಳ: ನಿಗಮ ಫ್ರೆಂಡ್ಸ್ ನಂದಾವರ ಹಾಗೂ ಆಡಳಿತ ಕಮಿಟಿ, ಕೇಂದ್ರ ಜುಮಾ ಮಸೀದಿ ನಂದಾವರ ಇದರ ವತಿಯಿಂದ’ ನಮ್ಮ ನಡೆ ಡ್ರಗ್ಸ್ ಮುಕ್ತ ನಂದಾವರ ಕಡೆ’ ಅಭಿಯಾನ ಕಾರ್ಯಕ್ರಮವು ನಂದಾವರ ಕೇಂದ್ರ ಜುಮಾ ಮಸೀದಿಯ ಸಮುದಾಯ ಭವನದ ಸಭಾಂಗಣದಲ್ಲಿ ನಡೆಯಿತು. ಈ ಅಭಿಯಾನವನ್ನು ಕರ್ನಾಟಕ ರಾಜ್ಯ ವಕ್ಸ್ಬೋರ್ಡ್ ನ ಅಧ್ಯಕ್ಷ ಎನ್. ಕೆ. ಮೊಹಮ್ಮದ್ ಶಾಫಿ ಸಅದಿ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಂದಾವರ ಕೇಂದ್ರ ಜುಮಾ ಮಸೀದಿಯ ಅಧ್ಯಕ್ಷ ಮಹಮ್ಮದ್ ಶರೀಫ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಂಟ್ವಾಳ ಉಪ ಪೊಲೀಸ್ ವರಿಷ್ಠಾಧಿಕಾರಿ ಪ್ರತಾಪ್ ಸಿಂಗ್ ತೋರಟ್, ಬಂಟ್ವಾಳ ಸರ್ಕಲ್ ಇನ್ಸ್ಪೆಕ್ಟರ್ ವಿವೇಕಾನಂದ, ಬಂಟ್ವಾಳ ನಗರ ಸಬ್ ಇನ್ಸ್ಪೆಕ್ಟರ್ ರಾಮಕೃಷ್ಣ, ಬಂಟ್ವಾಳ ನಗರ ಅಪರಾಧ ವಿಭಾಗದ ಸಬ್ ಇನ್ಸ್‌ಪೆಕ್ಟರ್ ಕಲೈಮಾರ್, ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರದ. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಅರವಿಂದ ಭಟ್ ಪದ್ಯಾಣ ಭಾಗವಹಿಸಿದ್ದರು. ನಂದಾವರ ಕೇಂದ್ರ ಜುಮಾ ಮಸೀದಿಯ ಖತೀಬ್ ಖಾಸಿಂ ದಾರಿಮಿ ಪ್ರಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಭಾಷಣಕಾರರಾಗಿ ಯುನಿವೆಫ್ ಕರ್ನಾಟಕ ಅಧ್ಯಕ್ಷರು ಜ. ರಫೀಉದ್ದೀನ್ ಕುದ್ರೋಳಿ, ರಾಜ್ಯತರಬೇತುದಾರರು ಕೆ.ಎಂ.ಇಸ್ಟಾಲ್ ಬಾಳಿಲ ಭಾಗವಹಿಸಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…