ಕರಾವಳಿ

ಮಂಗಳೂರು: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ಎಸ್‌ಐಆರ್ ನೋಟಿಸ್..!

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ಎಸ್‌ಐಆರ್‌ಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ನೋಟಿಸ್ ಜಾರಿಯಾಗಿದೆ.

2002ರ ಮತದಾರರ ಪಟ್ಟಿಯಲ್ಲಿ ಹರೇಕಳ ಹಾಜಬ್ಬ ಅವರ ಹೆಸರು ಕೇವಲ ‘ಹಾಜಬ್ಬ’ ಎಂದು ನಮೂದಾಗಿರುವುದು ನೋಟಿಸ್‌ಗೆ ಕಾರಣ ಎನ್ನಲಾಗಿದೆ. ಆದರೆ, ಅವರ ರೇಷನ್ ಕಾರ್ಡ್, ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಹಾಗೂ ಮತದಾರರ ಗುರುತಿನ ಚೀಟಿ ಸೇರಿದಂತೆ ಎಲ್ಲಾ ದಾಖಲೆಗಳಲ್ಲೂ ‘ಹರೇಕಳ ಹಾಜಬ್ಬ’ ಎಂದೇ ಹೆಸರು ನಮೂದಾಗಿದೆ.

ಎಸ್‌ಐಆರ್ ಪ್ರಕ್ರಿಯೆಯ ವೇಳೆ ಮತದಾರರ ಪಟ್ಟಿಯಲ್ಲಿರುವ ಹೆಸರು ಹಾಗೂ ಇತರ ದಾಖಲೆಗಳಲ್ಲಿನ ಹೆಸರು ತಾಳೆಯಾಗದ ಹಿನ್ನೆಲೆಯಲ್ಲಿ ಸಹಜ ಪ್ರಕ್ರಿಯೆಯಂತೆ ನೋಟಿಸ್ ಜಾರಿಯಾಗಿದೆ ಎಂದು ತಿಳಿದುಬಂದಿದೆ.

ಅಂಗನವಾಡಿ ಕಾರ್ಯಕರ್ತೆಯೊಬ್ಬರು ಹರೇಕಳ ಹಾಜಬ್ಬ ಅವರಿಗೆ ನೋಟಿಸ್ ನೀಡಿದ್ದಾರೆ. ಸೆಪ್ಟೆಂಬರ್ 11ರಂದು ಅಗತ್ಯವಿರುವ ಎಲ್ಲಾ ದಾಖಲೆಗಳೊಂದಿಗೆ ಗ್ರಾಮ ಪಂಚಾಯತ್‌ಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…

1 hour ago

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…

1 hour ago

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…

1 hour ago

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…

1 hour ago

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…

1 hour ago

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…

1 hour ago