ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಜವಾದ್ (32), ಸಾಹಿದ್ (32) ಹಾಗೂ ರಿಯಾಝ್ ಅಲಿಯಾಸ್ ಅಬ್ದುಲ್ ಗಫೂರ್ (42) ಎಂದು ಗುರುತಿಸಲಾಗಿದೆ.
2026ರ ಫೆಬ್ರವರಿಯಿಂದ ಆಗಸ್ಟ್ ಅವಧಿಯಲ್ಲಿ ಬಾಲಕನಿಗೆ ಲೈಂಗಿಕ ದೌರ್ಜನ್ಯ ನಡೆದಿರುವುದಾಗಿ ಸೆಪ್ಟೆಂಬರ್ 4ರಂದು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ದೂರಿನ ಆಧಾರದ ಮೇಲೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ತನಿಖೆಯ ಬಳಿಕ ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…