ತಾಲೂಕಿನ ಅನಂತಾಡಿ ಗ್ರಾಮದ ನಡುಮನೆ, ಸುದೆಕಟ್ಟೆಮಾರು ಹಾಗೂ ಪುಂಜಾವು ಭಾಗದ ಸಾರ್ವಜನಿಕರು ಸುಮಾರು 150ಕ್ಕೂ ಹೆಚ್ಚು ವರ್ಷಗಳಿಂದ ಬಳಸುತ್ತಿದ್ದ ಸರ್ವೆ ನಂಬರ್ 137ರ ಪ್ರಮುಖ ಕಾಲುದಾರಿಯನ್ನು ಬಂದ್ ಮಾಡಲಾಗಿದ್ದು, ಅದನ್ನು ತಕ್ಷಣ ತೆರವುಗೊಳಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಬಂಟ್ವಾಳ ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ದಾರೆ.
ಈ ಹಳೆಯ ಕಾಲುದಾರಿಯನ್ನು 50ಕ್ಕೂ ಹೆಚ್ಚು ಕುಟುಂಬಗಳು ಅವಲಂಬಿಸಿದ್ದು, ದಾರಿ ಬಂದ್ ಆಗಿರುವುದರಿಂದ ಶಾಲೆ, ಅಂಗನವಾಡಿ, ಹಾಲಿನ ಡೈರಿ, ಅಂಚೆ ಕಚೇರಿ ಹಾಗೂ ಆಸ್ಪತ್ರೆಗೆ ತೆರಳುವ ಸಾರ್ವಜನಿಕರು ಮತ್ತು ವೃದ್ಧರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ವಿಶೇಷವಾಗಿ ವೃದ್ಧಾಪ್ಯ ವೇತನ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಪಡೆಯಲು ಅಂಚೆ ಕಚೇರಿಗೆ ತೆರಳಬೇಕಾದ ಹಿರಿಯ ನಾಗರಿಕರು ದಾರಿ ಬಂದ್‌ನಿಂದ ಪರದಾಡುವಂತಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಸಾರ್ವಜನಿಕರ ಹಿತದೃಷ್ಟಿಯಿಂದ ಹಲವು ವರ್ಷಗಳಿಂದ ಬಳಕೆಯಲ್ಲಿರುವ ಈ ಕಾಲುದಾರಿಯನ್ನು ತಕ್ಷಣ ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂದು ಗ್ರಾಮಸ್ಥರು ತಹಶೀಲ್ದಾರರನ್ನು ಒತ್ತಾಯಿಸಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…