ಬಸವಕಲ್ಯಾಣದಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಸಾರಿಗೆ ಬಸ್‌ಗೆ ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಗರದ ಹೊರವಲಯದ ಧಾರವಾಡ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ.
ಮೃತರನ್ನು ಸ್ಥಳೀಯ ನಿವಾಸಿಗಳಾದ ವಿನಯ್ ಜೋಗೆನ್ನವರ ಹಾಗೂ ಆಕಾಶ್ ಜಾಧವ್ ಎಂದು ಗುರುತಿಸಲಾಗಿದೆ. ಮತ್ತೋರ್ವ ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ.
ಸಾರಿಗೆ ಬಸ್ ಸಂಚರಿಸುತ್ತಿದ್ದ ವೇಳೆ ಬೈಕ್ ಬಸ್‌ಗೆ ಡಿಕ್ಕಿ ಹೊಡೆದು ಅದರ ಕೆಳಗೆ ನುಗ್ಗಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ಕಾರಣ ಹಾಗೂ ಮತ್ತೋರ್ವ ಮೃತನ ಗುರುತು ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…