ಘೋಷಿತ ವಿದ್ಯುತ್ ಕಡಿತವನ್ನು ವಿರೋಧಿಸಿ ಬಿಜೆಪಿ ಕುಂಬಳೆ ಮಂಡಲ ಸಮಿತಿಯ ನೇತೃತ್ವದಲ್ಲಿ ಕುಂಬಳೆ ಕೆಎಸ್ಇಬಿ ಕಚೇರಿಗೆ ಪಂಜಿನ ಮೆರವಣಿಗೆ ನಡೆಸಲಾಯಿತು.
ಬಿಜೆಪಿ ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಎಂ.ಎಲ್. ಅವರು ಮೇಣದಬತ್ತಿ ಬೆಳಗಿಸುವ ಮೂಲಕ ಪ್ರತಿಭಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ವಿದ್ಯುತ್ ಕಡಿತದಿಂದ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ರಾಜ್ಯ ಸಮಿತಿ ಸದಸ್ಯ ವಿ. ರವೀಂದ್ರನ್, ಮಂಡಲ ಅಧ್ಯಕ್ಷ ಬಿ. ವಿಕ್ರಮ್ ಪೈ, ಮಂಡಲ ಉಪಾಧ್ಯಕ್ಷ ಸುಧಾಕರ್ ಕಾಮತ್, ಮಂಡಲ ಕೋಶಾಧಿಕಾರಿ ರಾಧಾಕೃಷ್ಣ ರೈ, ಒಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಲತಾ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಏರಿಯಾ ಸಮಿತಿ ಅಧ್ಯಕ್ಷರಾದ ಸುಜಿತ್ ರೈ ಹಾಗೂ ಶಿವಪ್ರಸಾದ್ ರೈ ಅವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ಬಂಟ್ವಾಳ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನವೆಂಬರ್ 26ರಂದು ಬೀಸಿದ ಗಾಳಿ ಹಾಗೂ ಸುರಿದ ಮಳೆಯಿಂದ ಮನೆಗಳಿಗೆ ಹಾನಿಯಾಗಿದ್ದು, ಮತ್ತೊಂದೆಡೆ ಕೊಟ್ಟಿಗೆಯೊಂದಕ್ಕೆ…
ಜನತಾಪ್ರಭ ಪತ್ರಿಕೆಯ ವತಿಯಿಂದ ನವೆಂಬರ್ 29ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ ರಾಜ್ಯೋತ್ಸವ ಸಂಭ್ರಮ–ಸಾಧಕರ ಸಮಾಗಮ’ ಕಾರ್ಯಕ್ರಮದ ಅಧ್ಯಕ್ಷರಾಗಿ ಕನ್ನಡ ಭವನದ…
ಉದ್ಯಮ, ಸಮಾಜಸೇವೆ ಹಾಗೂ ಕನ್ನಡ ನಾಡು-ನುಡಿಯ ಸೇವೆಯಲ್ಲಿ ಗುರುತಿಸಿಕೊಂಡಿರುವ ವಕ್ವಾಡಿ ಪ್ರವೀಣ್ ಶೆಟ್ಟಿಯವರು ಅಬುಧಾಬಿ ಕರ್ನಾಟಕ ಸಂಘದ 2026ನೇ ಸಾಲಿನ…
ಕತ್ತಿಯಿಂದ ಕಡಿದು ವ್ಯಕ್ತಿಯ ಕೊಲೆ ಮಾಡಿದ ಆರೋಪದಲ್ಲಿ 24 ವರ್ಷದ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಕನ್ಯಾನ ಗ್ರಾಮದ ನಂದರಬೆಟ್ಟು…
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ವಳಾಲು ಟೋಲ್ ಪ್ಲಾಝಾದಲ್ಲಿ ನವೆಂಬರ್ 26ರಿಂದ ಶುಲ್ಕ ವಸೂಲಿ ಆರಂಭಗೊಂಡಿದ್ದು, ಬೆಂಗಳೂರು ಪ್ರಯಾಣಿಕರಿಗೆ ಮತ್ತೊಂದು…
ಪತ್ನಿಯನ್ನು ಹತ್ಯೆಗೈದು, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಲು ಯತ್ನಿಸಿದ್ದ ಪತಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5…