ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮನೆ, ದೇವಸ್ಥಾನ ಕಳ್ಳತನ ಪ್ರಕರಣ; ಇಬ್ಬರ ಬಂಧನ, ₹1.19 ಲಕ್ಷ ನಗದು ವಶ…!

ಮನೆ ಹಾಗೂ ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದ ಆರೋಪದ ಮೇಲೆ ಇಬ್ಬರನ್ನು ಅಮಾಸೆಬೈಲು ಹಾಗೂ ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು ₹1,19,720 ನಗದನ್ನು ವಶಪಡಿಸಿಕೊಳ್ಳಲಾಗಿದೆ.

ಕುಂದಾಪುರ ತಾಲೂಕಿನ ಮಚ್ಚಟ್ಟು ಗ್ರಾಮದ ಜಾಂಬೂರು ಜೆಡ್ಡು–ನೆಲ್ಲಿಗದ್ದೆ ಪ್ರದೇಶದಲ್ಲಿ ಸೆ.4ರಂದು ಮನೆಯವರು ಕೆಲಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದು ಕಳ್ಳರು ಒಳನುಗ್ಗಿದ್ದರು. ಬಳಿಕ ಕೋಣೆಯಲ್ಲಿದ್ದ ಬಟ್ಟೆಗಳನ್ನು ಚೆಲ್ಲಾಪಿಲ್ಲಿ ಮಾಡಿ, ಗೋದ್ರೇಜ್‌ನಲ್ಲಿದ್ದ ಪೇಪರ್‌ನಲ್ಲಿ ಸುತ್ತಿಟ್ಟಿದ್ದ ₹97 ಸಾವಿರ ನಗದನ್ನು ಕಳವು ಮಾಡಿದ್ದರು. ಈ ಕುರಿತು ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದೇ ವೇಳೆ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಕುಳ್ಳುಂಜೆ ಗ್ರಾಮದ ಮುಂಡುಕೋಡು ಶ್ರೀ ಜಲದುರ್ಗಾ ಪರಮೇಶ್ವರಿ ದೇವಸ್ಥಾನದ ಕಾಣಿಕೆ ಹುಂಡಿ ಒಡೆದು ₹35 ಸಾವಿರದಿಂದ ₹40 ಸಾವಿರದವರೆಗೆ ಹಣ ಕಳವು ಮಾಡಿದ್ದ ಪ್ರಕರಣವೂ ದಾಖಲಾಗಿತ್ತು.

ಎರಡೂ ಪ್ರಕರಣಗಳ ಕುರಿತು ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ, ಕಳವು ಪ್ರಕರಣಕ್ಕೆ ಸಂಬಂಧಿಸಿದ ನಗದನ್ನು ವಶಪಡಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!