ಮನೆ ಹಾಗೂ ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದ ಆರೋಪದ ಮೇಲೆ ಇಬ್ಬರನ್ನು ಅಮಾಸೆಬೈಲು ಹಾಗೂ ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು ₹1,19,720 ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಕುಂದಾಪುರ ತಾಲೂಕಿನ ಮಚ್ಚಟ್ಟು ಗ್ರಾಮದ ಜಾಂಬೂರು ಜೆಡ್ಡು–ನೆಲ್ಲಿಗದ್ದೆ ಪ್ರದೇಶದಲ್ಲಿ ಸೆ.4ರಂದು ಮನೆಯವರು ಕೆಲಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದು ಕಳ್ಳರು ಒಳನುಗ್ಗಿದ್ದರು. ಬಳಿಕ ಕೋಣೆಯಲ್ಲಿದ್ದ ಬಟ್ಟೆಗಳನ್ನು ಚೆಲ್ಲಾಪಿಲ್ಲಿ ಮಾಡಿ, ಗೋದ್ರೇಜ್‌ನಲ್ಲಿದ್ದ ಪೇಪರ್‌ನಲ್ಲಿ ಸುತ್ತಿಟ್ಟಿದ್ದ ₹97 ಸಾವಿರ ನಗದನ್ನು ಕಳವು ಮಾಡಿದ್ದರು. ಈ ಕುರಿತು ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೇ ವೇಳೆ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಕುಳ್ಳುಂಜೆ ಗ್ರಾಮದ ಮುಂಡುಕೋಡು ಶ್ರೀ ಜಲದುರ್ಗಾ ಪರಮೇಶ್ವರಿ ದೇವಸ್ಥಾನದ ಕಾಣಿಕೆ ಹುಂಡಿ ಒಡೆದು ₹35 ಸಾವಿರದಿಂದ ₹40 ಸಾವಿರದವರೆಗೆ ಹಣ ಕಳವು ಮಾಡಿದ್ದ ಪ್ರಕರಣವೂ ದಾಖಲಾಗಿತ್ತು.
ಎರಡೂ ಪ್ರಕರಣಗಳ ಕುರಿತು ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ, ಕಳವು ಪ್ರಕರಣಕ್ಕೆ ಸಂಬಂಧಿಸಿದ ನಗದನ್ನು ವಶಪಡಿಸಿಕೊಂಡಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…