ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು, ಕಬಕ ಇದರ ಜಂಟಿ ಆಶ್ರಯದಲ್ಲಿ ಸೆ.11ರಂದು ನಡೆದ ಪುತ್ತೂರು ತಾಲೂಕು ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ತಂಡದ ಪ್ರಥಮ ವಿಜ್ಞಾನ ವಿಭಾಗದ ಎನ್. ವಿಜೇತಾ ಕುಲಾಲ್ ಅವರು ಪಂದ್ಯಾಟದಲ್ಲಿ ‘ಬೆಸ್ಟ್ ರೈಡರ್’ ಆಗಿ ಹೊರಹೊಮ್ಮಿದ್ದಾರೆ.
ತಂಡದ ಪರವಾಗಿ ದ್ವಿತೀಯ ವಾಣಿಜ್ಯ ವಿಭಾಗದ ಶ್ರೀನಿಧಿ ಬಿಲ್ಲವ, ಮೋಕ್ಷಾ, ಪಯಸ್ವಿನಿ ಎ.ಪಿ., ದ್ವಿತೀಯ ವಿಜ್ಞಾನ ವಿಭಾಗದ ಪ್ರತೀಕ್ಷಾ ಡಿ.ಯು., ಅಮಿಶಾ ಮೋಹನ್, ಏಂಜೆಲ್ ಜೆ., ಸುಪ್ರಿಯಾ ಎಸ್., ಅಕ್ಷರ ಎಂ.ಎಸ್., ಪ್ರಥಮ ವಿಜ್ಞಾನ ವಿಭಾಗದ ಎನ್. ವಿಜೇತಾ ಕುಲಾಲ್, ರಿಷಿಕಾ ಎ., ಪ್ರಥಮ ವಾಣಿಜ್ಯ ವಿಭಾಗದ ನಿಷಿತಾ ಹಾಗೂ ದ್ವಿತೀಯ ಕಲಾ ವಿಭಾಗದ ಸ್ವಸ್ತಿ ಶ್ರೀ ಎಚ್. ಆಚಾರ್ಯ ಭಾಗವಹಿಸಿದ್ದರು.
ತಂಡಕ್ಕೆ ಮಹಮದ್ ಅಬೀಬ್ ಅವರು ತರಬೇತಿ ನೀಡಿದ್ದರು. ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…