ಎಂಜಿನಿಯರಿಂಗ್, ಶಿಕ್ಷಣ ಹಾಗೂ ಸಮಾಜಸೇವಾ ಕ್ಷೇತ್ರದಲ್ಲಿ ಗಣನೀಯ ಕೊಡುಗೆ ನೀಡಿರುವ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರಿಗೆ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್ಸ್ (ಎಸಿಸಿಇ–ಇಂಡಿಯಾ) ವತಿಯಿಂದ ಗೌರವ ಫೆಲೋಶಿಪ್ ಪ್ರದಾನ ಮಾಡಲಾಗುವುದು.
ಸೆ.17ರಂದು ಬೆಂಗಳೂರಿನ ನಿಮ್ಹಾನ್ಸ್ ಕನ್ವೆನ್ಶನ್ ಸೆಂಟರ್‌ನಲ್ಲಿ ನಡೆಯಲಿರುವ ಎಂಜಿನಿಯರ್ಸ್ ಡೇ ಕಾರ್ಯಕ್ರಮದಲ್ಲಿ ಗೌರವ ಫೆಲೋಶಿಪ್ ಪ್ರದಾನಿಸಲಾಗುವುದು ಎಂದು ಎಸಿಸಿಇ ಅಧ್ಯಕ್ಷ ರಾಜೇಂದ್ರ ಕಲ್ಬಾವಿ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸಚಿವ ಕೃಷ್ಣ ಬೈರೇಗೌಡ ಹಾಗೂ ಸಂಸದ ಡಾ.ಸಿ.ಎನ್. ಮಂಜುನಾಥ್ ಅವರು ಪ್ರಶಸ್ತಿ ಪ್ರದಾನಿಸಲಿದ್ದಾರೆ ಎಂದರು.
ಎಸಿಸಿಇ(ಐ) ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರನ್ನು ಪ್ರತಿವರ್ಷ ಗೌರವಿಸಲಾಗುತ್ತಿದೆ. ಈ ಹಿಂದೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೂ ಗೌರವ ಫೆಲೋಶಿಪ್ ಪ್ರದಾನ ಮಾಡಲಾಗಿತ್ತು ಎಂದು ಅವರು ಹೇಳಿದರು.
ಇದೇ ವೇಳೆ ಸೆ.19ರಂದು ಮಂಗಳೂರಿನ ರೆಡ್‌ಕ್ರಾಸ್ ಭವನದಲ್ಲಿ ಎಂಜಿನಿಯರ್ಸ್ ಡೇ ಆಚರಣೆ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಇಬ್ಬರು ಎಂಜಿನಿಯರ್‌ಗಳನ್ನು ಸಮ್ಮಾನಿಸಲಾಗುವುದು ಎಂದು ರಾಜೇಂದ್ರ ಕಲ್ಬಾವಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಅರುಣ್ ರಾಜ್, ವಿಜಯ್ ವಿಷ್ಣುಮಯ್ಯ, ಸುಬ್ರಹ್ಮಣ್ಯ ಪ್ರಭು, ಚೆನ್ನಗಿರಿ ಗೌಡ, ಉಜ್ವಲ್ ಡಿಸೋಜಾ ಹಾಗೂ ಭರತ್ ಜೈನ್ ಉಪಸ್ಥಿತರಿದ್ದರು.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…