ಕರಾವಳಿ

ಮಂಗಳೂರು: ಹಂಪನಕಟ್ಟೆಯಲ್ಲೇ ತುಳು ಎಂ.ಎ. ಅಧ್ಯಯನ ಕೇಂದ್ರ ಮುಂದುವರಿಸಲು ಆಗ್ರಹ..!

ನಗರದ ಹಂಪನಕಟ್ಟೆಯ ವಿಶ್ವವಿದ್ಯಾಲಯ ಕಾಲೇಜಿನಲ್ಲೇ ತುಳು ಎಂ.ಎ. ಅಧ್ಯಯನ ಕೇಂದ್ರವನ್ನು ಮುಂದುವರಿಸಬೇಕು ಹಾಗೂ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳುವನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಘೋಷಿಸಬೇಕು ಎಂದು ‘ಪರಪು’ ತುಳು ಎಂ.ಎ. ಹಿರಿಯ ವಿದ್ಯಾರ್ಥಿಗಳ ಸಂಘ ಆಗ್ರಹಿಸಿದೆ.

ಮಂಗಳೂರು ವಿಶ್ವವಿದ್ಯಾಲಯವು 2018ರಲ್ಲಿ ಹಂಪನಕಟ್ಟೆಯ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ತುಳು ಸ್ನಾತಕೋತ್ತರ ಅಧ್ಯಯನ ಕೇಂದ್ರ ಆರಂಭಿಸಿತ್ತು. ಉತ್ತಮ ಪಠ್ಯಕ್ರಮದೊಂದಿಗೆ ಆರಂಭವಾದ ಈ ಕೋರ್ಸ್‌ನಲ್ಲಿ ಏಳು ಬ್ಯಾಚ್‌ಗಳಲ್ಲಿ ಸುಮಾರು 150 ಮಂದಿ ವಿದ್ಯಾರ್ಥಿಗಳು ತುಳು ಎಂ.ಎ. ಅಧ್ಯಯನ ಮಾಡಿದ್ದಾರೆ. ಆದರೆ ಕೋರ್ಸ್‌ನ್ನು ಹಂಪನಕಟ್ಟೆಯಿಂದ ಕೊಣಾಜೆಯ ವಿಶ್ವವಿದ್ಯಾಲಯ ಕ್ಯಾಂಪಸ್‌ಗೆ ಸ್ಥಳಾಂತರಿಸಿದ ಬಳಿಕ ಪ್ರವೇಶಾತಿ ಶೂನ್ಯವಾಗಿದೆ ಎಂದು ‘ಪರಪು’ ಅಧ್ಯಕ್ಷ ಸುಭಾಷ್‌ಚಂದ್ರ ಕಣ್ವತೀರ್ಥ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಉಡುಪಿ, ಸುಳ್ಯ, ಪುತ್ತೂರು, ಬೆಳ್ತಂಗಡಿ ಸೇರಿದಂತೆ ದೂರದ ಪ್ರದೇಶಗಳ ಆಸಕ್ತರಿಗೆ ಕೊಣಾಜೆಗೆ ತೆರಳಿ ಅಧ್ಯಯನ ಮಾಡಲು ತೊಂದರೆಯಾಗುತ್ತಿರುವುದು ಪ್ರವೇಶಾತಿ ಕುಸಿತಕ್ಕೆ ಕಾರಣವಾಗಿದೆ. ತುಳು ಎಂ.ಎ. ಅಧ್ಯಯನಕ್ಕೆ ಮುಂದಾಗುವವರು ಭಾಷೆಯ ಬೆಳವಣಿಗೆ ಹಾಗೂ ಸಂರಕ್ಷಣೆಯ ಉದ್ದೇಶದಿಂದ ಬರುತ್ತಾರೆ. ಹೀಗಾಗಿ ವಿದ್ಯಾರ್ಥಿಗಳ ಅನುಕೂಲವನ್ನು ಪರಿಗಣಿಸಿ ಹಂಪನಕಟ್ಟೆಯಲ್ಲೇ ತುಳು ಎಂ.ಎ. ಅಧ್ಯಯನ ಕೇಂದ್ರವನ್ನು ಪುನರಾರಂಭಿಸಿ ಶಾಶ್ವತವಾಗಿ ಮುಂದುವರಿಸಬೇಕು ಎಂದು ಅವರು ಒತ್ತಾಯಿಸಿದರು.

ಹಂಪನಕಟ್ಟೆಯ ತುಳು ಎಂ.ಎ. ಕೇಂದ್ರದಲ್ಲಿದ್ದ ವಿದ್ಯಾರ್ಥಿಗಳ ಅಗತ್ಯತೆಗಳನ್ನು ಗಮನಿಸಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಗ್ರಂಥಾಲಯ ಹಾಗೂ ಅಗತ್ಯ ಪೀಠೋಪಕರಣಗಳನ್ನು ಒದಗಿಸಿದ್ದರು. ಆದರೆ ಕೋರ್ಸ್‌ ಸ್ಥಳಾಂತರಗೊಂಡ ಬಳಿಕ ಈ ಸೌಲಭ್ಯಗಳು ಬಳಕೆಯಾಗದೆ ಉಳಿದಿವೆ. ಮಂಗಳೂರು ವಿಶ್ವವಿದ್ಯಾಲಯದ ನಿರ್ಧಾರಗಳಿಂದಲೇ ತುಳು ಅಧ್ಯಯನ ಕೇಂದ್ರ ಅತಂತ್ರ ಸ್ಥಿತಿಗೆ ತಲುಪಿದೆ ಎಂದು ಸುಭಾಷ್‌ಚಂದ್ರ ಕಣ್ವತೀರ್ಥ ಆರೋಪಿಸಿದರು.

ಉನ್ನತ ಶಿಕ್ಷಣ ಹಂತದಲ್ಲಿ ತುಳು ಅಧ್ಯಯನಕ್ಕೆ ಹೆಚ್ಚಿನ ಉತ್ತೇಜನ ದೊರೆತರೆ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜು ಹಂತದಲ್ಲಿಯೂ ತುಳು ಭಾಷಾ ಅಧ್ಯಯನಕ್ಕೆ ಬಲ ಸಿಗಲಿದೆ. ಮಂಗಳೂರು ವಿಶ್ವವಿದ್ಯಾಲಯವೇ ತುಳು ಭಾಷೆಯ ಶೈಕ್ಷಣಿಕ ಬೆಳವಣಿಗೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ‘ಪರಪು’ ಉಪಾಧ್ಯಕ್ಷ ಹರೀಶ ಎ., ಸದಸ್ಯರಾದ ಗೀತಾ ಜೈನ್‌, ಭಾಗ್ಯಶ್ರೀ ಶೆಟ್ಟಿ, ಶಿವರಾಮ ಶೆಟ್ಟಿ, ಚಂದ್ರಹಾಸ ಕಣಂತೂರು ಹಾಗೂ ಜ್ಞಾನೇಶ್ವರಿ ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…

15 hours ago

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…

15 hours ago

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…

16 hours ago

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…

16 hours ago

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…

16 hours ago

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…

6 days ago