ಕರಾವಳಿ

ಪುತ್ತೂರು: ಮಕ್ಕಳಲ್ಲಿ ಆತ್ಮವಿಶ್ವಾಸ, ಜೀವನಪ್ರಜ್ಞೆ ಬೆಳೆಸುವುದು ಪೋಷಕರ ಜವಾಬ್ದಾರಿ…!

ಮಕ್ಕಳಲ್ಲಿ ಆತ್ಮವಿಶ್ವಾಸ, ಜವಾಬ್ದಾರಿಯ ಪ್ರಜ್ಞೆ ಹಾಗೂ ಜೀವನ ಮೌಲ್ಯಗಳನ್ನು ಬೆಳೆಸುವುದು ಪೋಷಕರ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಟ್ಟಂಪಾಡಿಯ ಪ್ರಾಂಶುಪಾಲ ಪ್ರೊ. ದಾಮೋದರ ಕಣಜಾಲು ಹೇಳಿದರು.

ಪುತ್ತೂರಿನ ಸಂತ ಫಿಲೋಮೀನಾ (ಸ್ವಾಯತ್ತ) ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆಯಲ್ಲಿ ‘ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ಪೋಷಕರ ಕಾಳಜಿ’ ವಿಷಯದ ಕುರಿತು ಅವರು ಮಾತನಾಡಿದರು. ಮಕ್ಕಳ ಬಗ್ಗೆ ಅತಿಯಾದ ಕಾಳಜಿ ವಹಿಸುವುದಕ್ಕಿಂತ, ಅವರು ತಮ್ಮ ಜವಾಬ್ದಾರಿಯನ್ನು ಅರಿತು ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳುವಂತೆ ಬೆಳೆಸಬೇಕು ಎಂದರು.

ಪೋಷಕರು ಮಕ್ಕಳ ಚಟುವಟಿಕೆಗಳು ಹಾಗೂ ಮನೋಭಾವವನ್ನು ಅರಿತುಕೊಳ್ಳಲು ಸೂಕ್ತ ಗಮನ ಹರಿಸಬೇಕು. ಮಕ್ಕಳನ್ನು ಸ್ನೇಹಿತರಂತೆ ಕಂಡು ಅವರೊಂದಿಗೆ ಮುಕ್ತವಾಗಿ ಸಂವಹನ ನಡೆಸಬೇಕು. ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸುವುದರ ಜೊತೆಗೆ ಜೀವನದಲ್ಲಿ ಸಾಧನೆಯ ಆತ್ಮಸಂತೃಪ್ತಿಯನ್ನು ಹೊಂದುವಂತೆ ಮಾರ್ಗದರ್ಶನ ನೀಡುವುದು ಅಗತ್ಯ ಎಂದು ಪ್ರೊ. ದಾಮೋದರ ಕಣಜಾಲು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸಂಚಾಲಕ ಅತಿ ವಂ. ಡಾ. ಜಾನ್ ಬಿ. ಸಲ್ದಾನ್ಹಾ ಅವರು ಜೆನ್‌-ಜಿ ಪೀಳಿಗೆಯ ಕುರಿತು ಮಾತನಾಡಿ, ಮಕ್ಕಳಲ್ಲಿ ಪ್ರಶ್ನಿಸುವ ಮನೋಭಾವ ಬೆಳೆಸಬೇಕು. ಅವರ ಮೂಲಭೂತ ಅಗತ್ಯಗಳನ್ನು ಪೂರೈಸುವುದರೊಂದಿಗೆ ಉತ್ತಮ ಕೆಲಸ ಹಾಗೂ ಉತ್ತಮ ಜೀವನದತ್ತ ಸಾಗಲು ಸೂಕ್ತ ಮಾರ್ಗದರ್ಶನ ನೀಡಬೇಕು ಎಂದರು. ಸಮಾಜದಲ್ಲಿ ಮಹಿಳೆಯರಿಗೆ ಗೌರವ ಹಾಗೂ ಸಮಾನ ಅವಕಾಶಗಳನ್ನು ಒದಗಿಸುವ ಅಗತ್ಯವನ್ನೂ ಅವರು ಒತ್ತಿ ಹೇಳಿದರು.

ಕಾಲೇಜಿನ ಪ್ರಾಂಶುಪಾಲ ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ ಪ್ರಾಸ್ತಾವಿಕ ನುಡಿಗಳನ್ನಾಡಿದರು. ರಕ್ಷಕ-ಶಿಕ್ಷಕ ಸಂಘದ ಕಾರ್ಯದರ್ಶಿ ಪ್ರಶಾಂತ್ ರೈ ವಾರ್ಷಿಕ ವರದಿ ವಾಚಿಸಿದರೆ, ಖಜಾಂಚಿ ಪ್ರೇಮಲತಾ ಕೆ. ಆಯವ್ಯಯ ಪತ್ರ ಮಂಡಿಸಿದರು. ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥ ಡಾ. ರಾಧಾಕೃಷ್ಣ ಗೌಡ ವಿ. ಅವರ ನೇತೃತ್ವದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಅಧಿಕಾರ ಹಸ್ತಾಂತರ ನಡೆಯಿತು.

ನೂತನ ಅಧ್ಯಕ್ಷರಾಗಿ ಸತೀಶ್ ನಾಯ್ಕ್, ಕಡಬ ಹಾಗೂ ಉಪಾಧ್ಯಕ್ಷರಾಗಿ ಮೀನಾಕ್ಷಿ ವಿ. ರೈ ಆಯ್ಕೆಯಾದರು. ಚರ್ಚ್ ಪಾಲನ ಸಮಿತಿಯ ಉಪಾಧ್ಯಕ್ಷ ರೋಷನ್ ಲಾಸ್ರದೋ ಉಪಸ್ಥಿತರಿದ್ದರು. ವಾರಿಜ ಎಂ. ಮತ್ತು ಬಳಗ ಪ್ರಾರ್ಥಿಸಿದರು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಡಾ. ಅಬೂಬಕರ್ ಆರ್ಲಪದವು ಸ್ವಾಗತಿಸಿದರು. ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಜಯಕುಮಾರ್ ಎಂ. ವಂದಿಸಿದರು. ಶಿವಾನಿ ಮಲ್ಯ ಎನ್. ಕಾರ್ಯಕ್ರಮ ನಿರೂಪಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…

15 hours ago

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…

15 hours ago

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…

15 hours ago

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…

15 hours ago

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…

15 hours ago

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…

6 days ago