ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ)ದಲ್ಲಿ 2026–27ನೇ ಸಾಲಿನ ಗ್ರಾಹಕ ವೇದಿಕೆ (ಕನ್ಸ್ಯೂಮರ್ ಫೋರಂ) ಚಟುವಟಿಕೆಗಳಿಗೆ ಮಂಗಳವಾರ ಸ್ಪಂದನ ಸೆಮಿನಾರ್ ಹಾಲ್‌ನಲ್ಲಿ ಚಾಲನೆ ನೀಡಲಾಯಿತು.
ವಿದ್ಯಾರ್ಥಿಗಳಲ್ಲಿ ಗ್ರಾಹಕರ ಹಕ್ಕುಗಳು, ಜವಾಬ್ದಾರಿಗಳು ಹಾಗೂ ಗ್ರಾಹಕ ದೂರುಗಳ ಪರಿಹಾರಕ್ಕೆ ಲಭ್ಯವಿರುವ ವ್ಯವಸ್ಥೆಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮಂಗಳೂರಿನ ಗ್ರಾಹಕ ಮಾಹಿತಿ ಕೇಂದ್ರದ ಉಪಾಧ್ಯಕ್ಷ ಎಡ್ವಿನ್ ನಜಾರಿಯಸ್ ಡಿ’ಮೆಲ್ಲೋ ಮುಖ್ಯ ಅತಿಥಿಯಾಗಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಕಾರ್ಯದರ್ಶಿ ಡಿ.ಆರ್. ಸುನಂದಾ ಗೌರವ ಅತಿಥಿಯಾಗಿ ಭಾಗವಹಿಸಿದ್ದರು.
ಎಡ್ವಿನ್ ನಜಾರಿಯಸ್ ಡಿ’ಮೆಲ್ಲೋ ಮಾತನಾಡಿ, ಮಂಗಳೂರಿನ ಗ್ರಾಹಕ ಮಾಹಿತಿ ಕೇಂದ್ರದ ಕಾರ್ಯವೈಖರಿ ಹಾಗೂ ಗ್ರಾಹಕರಿಗೆ ಒದಗಿಸುವ ನೆರವಿನ ಕುರಿತು ವಿವರಿಸಿದರು. ವಿದ್ಯಾರ್ಥಿಗಳು ತಮ್ಮ ಹಕ್ಕುಗಳ ಬಗ್ಗೆ ಅರಿವು ಹೊಂದುವುದರ ಜತೆಗೆ ಜವಾಬ್ದಾರಿಯುತ ಹಾಗೂ ಜಾಗೃತ ಗ್ರಾಹಕರಾಗಿ ರೂಪುಗೊಳ್ಳಬೇಕು ಎಂದು ಕರೆ ನೀಡಿದರು.
ಡಿ.ಆರ್. ಸುನಂದಾ ಮಾತನಾಡಿ, ದೈನಂದಿನ ಬದುಕಿನಲ್ಲಿ ಗ್ರಾಹಕ ಜಾಗೃತಿಯ ಮಹತ್ವ, ಗ್ರಾಹಕರು ಎದುರಿಸುವ ಸಮಸ್ಯೆಗಳು ಹಾಗೂ ದೂರುಗಳ ಪರಿಹಾರದಲ್ಲಿ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರಗಳ ಪಾತ್ರವನ್ನು ವಿವರಿಸಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ರೆ. ಡಾ. ಆಂಟನಿ ಪ್ರಕಾಶ್ ಮೊಂತೆರೊ ಅವರು ಗ್ರಾಹಕ ವೇದಿಕೆಯ ಉಪಕ್ರಮವನ್ನು ಶ್ಲಾಘಿಸಿ, ವಿದ್ಯಾರ್ಥಿಗಳು ವೇದಿಕೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಅದರ ಉದ್ದೇಶಗಳನ್ನು ಸಾಕಾರಗೊಳಿಸಬೇಕು ಎಂದು ಹೇಳಿದರು.
2026–27ನೇ ಸಾಲಿನಲ್ಲಿ ಗ್ರಾಹಕ ವೇದಿಕೆ ಹಮ್ಮಿಕೊಳ್ಳಲಿರುವ ವಿವಿಧ ಚಟುವಟಿಕೆಗಳ ಕಾರ್ಯಯೋಜನೆಯನ್ನು ಕಿರುಚಿತ್ರ ಪ್ರದರ್ಶನದ ಮೂಲಕ ಅನಾವರಣಗೊಳಿಸಲಾಯಿತು.
ಶಿಲ್ಪಾ ಇ. ಸ್ವಾಗತಿಸಿದರು. ವಿಸ್ಮಿತ್ ವಂದನಾರ್ಪಣೆ ಸಲ್ಲಿಸಿದರು. ಗ್ರಾಹಕ ವೇದಿಕೆಯ ಸಂಯೋಜಕರಾದ ಸ್ವಾತಿ ಶೆಟ್ಟಿ ಡಿ. ಹಾಗೂ ಕಿಶೋರ್ ಕುಮಾರ್ ರೈ ಕಾರ್ಯಕ್ರಮವನ್ನು ಸಂಯೋಜಿಸಿದರು. ಅಪೂರ್ವಾ ಕಾರ್ಯಕ್ರಮ ನಿರೂಪಿಸಿದರು.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…