ಪಡಿತರ ಚೀಟಿದಾರರ ಇ-ಕೆವೈಸಿ ಪೂರ್ಣಗೊಳಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಗಡುವು ನಿಗದಿಪಡಿಸಿರುವ ಬೆನ್ನಲ್ಲೇ, ದಕ್ಷಿಣ ಕನ್ನಡ ಜಿಲ್ಲೆಯ ಹಲವು ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಹಾಗೂ ತಾಂತ್ರಿಕ ಸಮಸ್ಯೆ ಎದುರಾಗಿದ್ದು, ಫಲಾನುಭವಿಗಳು ಪರದಾಡುವಂತಾಗಿದೆ.
ಜಿಲ್ಲೆಯಲ್ಲಿ ಐದು ವರ್ಷ ಪೂರೈಸಿದ ಫಲಾನುಭವಿಗಳ ಇ-ಕೆವೈಸಿ ನವೀಕರಣಕ್ಕೆ ಸೂಚಿಸಲಾಗಿದ್ದು, ಸೆ.30ರೊಳಗೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಇಲಾಖೆ ಸೂಚಿಸಿದೆ. ಆಗಸ್ಟ್‌ನಲ್ಲಿ ನೀಡಿದ್ದ ಇಲಾಖೆಯ ಮಾಹಿತಿಯಂತೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2,16,436 ಪಡಿತರ ಚೀಟಿಗಳಲ್ಲಿನ 6,62,195 ಫಲಾನುಭವಿಗಳ ಇ-ಕೆವೈಸಿ ಬಾಕಿಯಿದೆ.
ಇ-ಕೆವೈಸಿಗಾಗಿ ಕುಟುಂಬದ ಸದಸ್ಯರು ನ್ಯಾಯಬೆಲೆ ಅಂಗಡಿಗೆ ತೆರಳಿ ಬಯೋಮೆಟ್ರಿಕ್ ದೃಢೀಕರಣ ಮಾಡಬೇಕಾಗಿದೆ. ಒಂದೇ ಕುಟುಂಬದ ಹಲವು ಸದಸ್ಯರಿದ್ದರೆ ಪ್ರಕ್ರಿಯೆ ಪೂರ್ಣಗೊಳಿಸಲು ಹೆಚ್ಚಿನ ಸಮಯ ಬೇಕಾಗುತ್ತಿದ್ದು, ಇದರ ನಡುವೆ ಸರ್ವರ್ ನಿಧಾನಗತಿ ಅಥವಾ ಸಂಪರ್ಕ ಕಡಿತವಾದರೆ ಫಲಾನುಭವಿಗಳು ಮತ್ತಷ್ಟು ಸಮಯ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಮಂಗಳೂರು ನಗರ ಸೇರಿದಂತೆ ಜಿಲ್ಲೆಯ ಹಲವು ನ್ಯಾಯಬೆಲೆ ಅಂಗಡಿಗಳಲ್ಲಿ ತಾಂತ್ರಿಕ ದೋಷದಿಂದ ಫಲಾನುಭವಿಗಳು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲುವಂತಾಗಿದೆ. ವಯೋವೃದ್ಧರು, ಅನಾರೋಗ್ಯಪೀಡಿತರು, ಅಂಗವಿಕಲರು ಹಾಗೂ ದೂರದ ಗ್ರಾಮೀಣ ಪ್ರದೇಶಗಳಿಂದ ಬರುವವರಿಗೆ ಈ ಸಮಸ್ಯೆ ಮತ್ತಷ್ಟು ಸಂಕಷ್ಟ ತಂದಿದೆ.
ಬೆರಳಚ್ಚು ಹೊಂದಾಣಿಕೆಯಾಗದಿದ್ದರೆ ಮರುಪ್ರಯತ್ನ ಮಾಡಬೇಕಾಗುತ್ತಿದ್ದು, ಒಟಿಪಿ ತಡವಾಗುವುದು ಹಾಗೂ ಸರ್ವರ್ ಸ್ಪಂದಿಸದಿರುವುದು ಪ್ರಕ್ರಿಯೆಗೆ ಅಡ್ಡಿಯಾಗುತ್ತಿದೆ. ರಾಜ್ಯದ ಇತರ ಜಿಲ್ಲೆಗಳಲ್ಲಿಯೂ ಇದೇ ರೀತಿಯ ಸರ್ವರ್ ಸಮಸ್ಯೆಯಿಂದ ಫಲಾನುಭವಿಗಳು ಗಂಟೆಗಟ್ಟಲೆ ಕಾಯುತ್ತಿರುವ ವರದಿಗಳಿವೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…