ಜನ ಮನದ ನಾಡಿ ಮಿಡಿತ

Advertisement

ಉಳ್ಳಾಲ: ಕುತ್ತಾರುವಿನಲ್ಲಿ ಭೀಕರ ಅಪಘಾತ; ಯುವಕನ ಮೆದುಳು ನಿಷ್ಕ್ರಿಯ, ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ…!

ಗಣೇಶ ಚತುರ್ಥಿಯಂದು ಕುತ್ತಾರುವಿನ ಕೊರಗಜ್ಜನ ಆದಿಕ್ಷೇತ್ರದ ಕಟ್ಟೆಯ ಬಳಿ ನಡೆದ ಬೈಕ್–ಸ್ಕೂಟರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು, ಕುಟುಂಬಸ್ಥರು ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ.

ಕುತ್ತಾರುವಿನ ಆಯೆರೆಬೆಟ್ಟು ನಿವಾಸಿ ಗೋಪಾಲ ಹಾಗೂ ವೇದಾವತಿ ದಂಪತಿಯ ಪುತ್ರ ವರ್ಷಿತ್ ಕುಲಾಲ್ (21) ಮೆದುಳು ನಿಷ್ಕ್ರಿಯಗೊಂಡ ಯುವಕ. ಸೋಮವಾರ ರಾತ್ರಿ ಸುಮಾರು 7.30ರ ವೇಳೆಗೆ ಕುತ್ತಾರುವಿನಿಂದ ಮನೆಗೆ ತೆರಳುತ್ತಿದ್ದ ವೇಳೆ, ಕೊರಗಜ್ಜನ ಆದಿಕ್ಷೇತ್ರದ ಬಳಿಯ ದುರ್ಗಾ ಆಟೋ ವರ್ಕ್ಸ್ ಮುಂಭಾಗದಲ್ಲಿ ರಾಣಿಪುರದಿಂದ ಕುತ್ತಾರು ಕಡೆಗೆ ಬರುತ್ತಿದ್ದ ಸ್ಕೂಟರ್‌ಗೆ ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ.

ಅಪಘಾತದ ರಭಸಕ್ಕೆ ರಸ್ತೆಗೆ ಬಿದ್ದ ವರ್ಷಿತ್ ತಲೆಗೆ ತೀವ್ರ ಗಾಯಗೊಂಡಿದ್ದರು. ತಕ್ಷಣ ಅವರನ್ನು ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೆದುಳು ನಿಷ್ಕ್ರಿಯಗೊಂಡಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ವೈದ್ಯರ ಸಲಹೆಯಂತೆ ವರ್ಷಿತ್ ಅವರ ಪೋಷಕರು ಅಂಗಾಂಗ ದಾನಕ್ಕೆ ನಿರ್ಧರಿಸಿದ್ದಾರೆ. ಅವರ ಕಿಡ್ನಿ, ಯಕೃತ್ತು, ಹೃದಯ ಹಾಗೂ ಶ್ವಾಸಕೋಶಕ್ಕೆ ವಿವಿಧ ಆಸ್ಪತ್ರೆಗಳಿಂದ ಬೇಡಿಕೆ ಬಂದಿದ್ದು, ಅಂಗಾಂಗಗಳನ್ನು ಝೀರೋ ಟ್ರಾಫಿಕ್ ಮೂಲಕ ರವಾನಿಸುವ ಪ್ರಕ್ರಿಯೆ ನಡೆಯಲಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಅಪಘಾತದಲ್ಲಿ ಸ್ಕೂಟರ್ ಸವಾರ ಧೀರಜ್ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವಿವಾಹಿತನಾಗಿದ್ದ ವರ್ಷಿತ್ ಫ್ಯಾಬ್ರಿಕೇಷನ್ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!