ಗಣೇಶ ಚತುರ್ಥಿಯಂದು ಕುತ್ತಾರುವಿನ ಕೊರಗಜ್ಜನ ಆದಿಕ್ಷೇತ್ರದ ಕಟ್ಟೆಯ ಬಳಿ ನಡೆದ ಬೈಕ್–ಸ್ಕೂಟರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು, ಕುಟುಂಬಸ್ಥರು ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ.
ಕುತ್ತಾರುವಿನ ಆಯೆರೆಬೆಟ್ಟು ನಿವಾಸಿ ಗೋಪಾಲ ಹಾಗೂ ವೇದಾವತಿ ದಂಪತಿಯ ಪುತ್ರ ವರ್ಷಿತ್ ಕುಲಾಲ್ (21) ಮೆದುಳು ನಿಷ್ಕ್ರಿಯಗೊಂಡ ಯುವಕ. ಸೋಮವಾರ ರಾತ್ರಿ ಸುಮಾರು 7.30ರ ವೇಳೆಗೆ ಕುತ್ತಾರುವಿನಿಂದ ಮನೆಗೆ ತೆರಳುತ್ತಿದ್ದ ವೇಳೆ, ಕೊರಗಜ್ಜನ ಆದಿಕ್ಷೇತ್ರದ ಬಳಿಯ ದುರ್ಗಾ ಆಟೋ ವರ್ಕ್ಸ್ ಮುಂಭಾಗದಲ್ಲಿ ರಾಣಿಪುರದಿಂದ ಕುತ್ತಾರು ಕಡೆಗೆ ಬರುತ್ತಿದ್ದ ಸ್ಕೂಟರ್‌ಗೆ ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ.
ಅಪಘಾತದ ರಭಸಕ್ಕೆ ರಸ್ತೆಗೆ ಬಿದ್ದ ವರ್ಷಿತ್ ತಲೆಗೆ ತೀವ್ರ ಗಾಯಗೊಂಡಿದ್ದರು. ತಕ್ಷಣ ಅವರನ್ನು ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೆದುಳು ನಿಷ್ಕ್ರಿಯಗೊಂಡಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ವೈದ್ಯರ ಸಲಹೆಯಂತೆ ವರ್ಷಿತ್ ಅವರ ಪೋಷಕರು ಅಂಗಾಂಗ ದಾನಕ್ಕೆ ನಿರ್ಧರಿಸಿದ್ದಾರೆ. ಅವರ ಕಿಡ್ನಿ, ಯಕೃತ್ತು, ಹೃದಯ ಹಾಗೂ ಶ್ವಾಸಕೋಶಕ್ಕೆ ವಿವಿಧ ಆಸ್ಪತ್ರೆಗಳಿಂದ ಬೇಡಿಕೆ ಬಂದಿದ್ದು, ಅಂಗಾಂಗಗಳನ್ನು ಝೀರೋ ಟ್ರಾಫಿಕ್ ಮೂಲಕ ರವಾನಿಸುವ ಪ್ರಕ್ರಿಯೆ ನಡೆಯಲಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಅಪಘಾತದಲ್ಲಿ ಸ್ಕೂಟರ್ ಸವಾರ ಧೀರಜ್ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವಿವಾಹಿತನಾಗಿದ್ದ ವರ್ಷಿತ್ ಫ್ಯಾಬ್ರಿಕೇಷನ್ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…