ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಿ.ಸಿ.ರೋಡಿನ ಪ್ರಣಾಮ್ ಹೋಟೆಲ್ ಮಾಲೀಕ ಶಿವ ರಾವ್ ನಿಧನ…!

ಹಲವು ದಶಕಗಳ ಕಾಲ ತಮ್ಮ ಹೋಟೆಲ್‌ನ ವಿಶಿಷ್ಟ ಚಹಾ ಹಾಗೂ ತಾಜಾ ತಿನಿಸುಗಳ ಮೂಲಕ ಬಿ.ಸಿ.ರೋಡಿನಲ್ಲಿ ಮನೆಮಾತಾಗಿದ್ದ ಪ್ರಸಿದ್ಧ ಪ್ರಣಾಮ್ ಹೋಟೆಲ್ ಮಾಲೀಕ ಶಿವ ರಾವ್ (80) ಅವರು ಬುಧವಾರ ರಾತ್ರಿ ಬೆಂಗಳೂರಿನಲ್ಲಿರುವ ಪುತ್ರನ ಮನೆಯಲ್ಲಿ ನಿಧನರಾದರು.

ಕೆಲವು ದಶಕಗಳ ಹಿಂದೆ ಬಿ.ಸಿ.ರೋಡಿನಲ್ಲಿ ಪ್ರಣಾಮ್ ಹೋಟೆಲ್ ಸ್ಥಾಪಿಸಿ ಮುನ್ನಡೆಸಿದ್ದ ಶಿವ ರಾವ್ ಅವರು, ಕೆಲ ವರ್ಷಗಳ ಹಿಂದೆ ಹೋಟೆಲ್‌ ವ್ಯವಹಾರವನ್ನು ಸ್ಥಗಿತಗೊಳಿಸಿ ವಿಶ್ರಾಂತ ಜೀವನ ನಡೆಸುತ್ತಿದ್ದರು. ಅವರ ಹೋಟೆಲ್‌ನ ಚಹಾ ಮತ್ತು ತಾಜಾ ತಿನಿಸುಗಳು ಸ್ಥಳೀಯರಲ್ಲಿ ವಿಶೇಷ ಜನಪ್ರಿಯತೆ ಪಡೆದಿದ್ದವು.

ಶಿವ ರಾವ್ ಅವರು ಬಿ.ಸಿ.ರೋಡಿನ ಚಂಡಿಕಾಪರಮೇಶ್ವರಿ ದೇವಸ್ಥಾನ ಸೇರಿದಂತೆ ವಿವಿಧೆಡೆ ನಡೆಯುತ್ತಿದ್ದ ಭಜನಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಸಂಗೀತ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಆಸಕ್ತಿಯಿಂದ ತೊಡಗಿಸಿಕೊಂಡಿದ್ದರು.

ಮೃತರು ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!