ಹಲವು ದಶಕಗಳ ಕಾಲ ತಮ್ಮ ಹೋಟೆಲ್‌ನ ವಿಶಿಷ್ಟ ಚಹಾ ಹಾಗೂ ತಾಜಾ ತಿನಿಸುಗಳ ಮೂಲಕ ಬಿ.ಸಿ.ರೋಡಿನಲ್ಲಿ ಮನೆಮಾತಾಗಿದ್ದ ಪ್ರಸಿದ್ಧ ಪ್ರಣಾಮ್ ಹೋಟೆಲ್ ಮಾಲೀಕ ಶಿವ ರಾವ್ (80) ಅವರು ಬುಧವಾರ ರಾತ್ರಿ ಬೆಂಗಳೂರಿನಲ್ಲಿರುವ ಪುತ್ರನ ಮನೆಯಲ್ಲಿ ನಿಧನರಾದರು.
ಕೆಲವು ದಶಕಗಳ ಹಿಂದೆ ಬಿ.ಸಿ.ರೋಡಿನಲ್ಲಿ ಪ್ರಣಾಮ್ ಹೋಟೆಲ್ ಸ್ಥಾಪಿಸಿ ಮುನ್ನಡೆಸಿದ್ದ ಶಿವ ರಾವ್ ಅವರು, ಕೆಲ ವರ್ಷಗಳ ಹಿಂದೆ ಹೋಟೆಲ್ ವ್ಯವಹಾರವನ್ನು ಸ್ಥಗಿತಗೊಳಿಸಿ ವಿಶ್ರಾಂತ ಜೀವನ ನಡೆಸುತ್ತಿದ್ದರು. ಅವರ ಹೋಟೆಲ್‌ನ ಚಹಾ ಮತ್ತು ತಾಜಾ ತಿನಿಸುಗಳು ಸ್ಥಳೀಯರಲ್ಲಿ ವಿಶೇಷ ಜನಪ್ರಿಯತೆ ಪಡೆದಿದ್ದವು.
ಶಿವ ರಾವ್ ಅವರು ಬಿ.ಸಿ.ರೋಡಿನ ಚಂಡಿಕಾಪರಮೇಶ್ವರಿ ದೇವಸ್ಥಾನ ಸೇರಿದಂತೆ ವಿವಿಧೆಡೆ ನಡೆಯುತ್ತಿದ್ದ ಭಜನಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಸಂಗೀತ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಆಸಕ್ತಿಯಿಂದ ತೊಡಗಿಸಿಕೊಂಡಿದ್ದರು.
ಮೃತರು ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…