ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ; ಚಿನ್ನಾಭರಣ, ನಗದು ಕಳವು…!

ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ಹಾಗೂ ನಗದು ಕಳವು ಮಾಡಿರುವ ಘಟನೆ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದಲ್ಲಿ ನಡೆದಿದೆ.

ಸಜೀಪಮುನ್ನೂರು ಗ್ರಾಮದ ಪ್ರಪುಲ್ಲಾ ಜಾನೆಟ್ ಡಿಕ್ರೂಸ್ ಅವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಸೆ.14ರಂದು ಸಂಜೆ ಅವರು ಮಕ್ಕಳೊಂದಿಗೆ ಬೆಳ್ಳಾರೆಗೆ ತೆರಳಿದ್ದರು. ಸೆ.15ರಂದು ಬೆಳಗ್ಗೆ ಮನೆಗೆ ವಾಪಸಾದಾಗ ಬೆಡ್‌ರೂಮ್‌ನ ಮಂಚದ ಮೇಲಿದ್ದ ಬೆಡ್‌ ಅನ್ನು ಸರಿಸಿರುವುದು ಕಂಡುಬಂದಿದೆ.

ವಾರ್ಡ್‌ರೋಬ್‌ ಬಾಗಿಲು ತೆರೆದು ಬಟ್ಟೆಗಳನ್ನು ಚೆಲ್ಲಾಪಿಲ್ಲಿ ಮಾಡಲಾಗಿದ್ದು, ಪರಿಶೀಲಿಸಿದಾಗ ಸುಮಾರು 4 ಗ್ರಾಂ ತೂಕದ ಎರಡು ಜತೆ ಚಿನ್ನದ ಕಿವಿಯೋಲೆಗಳು ಕಳವಾಗಿರುವುದು ಬೆಳಕಿಗೆ ಬಂದಿದೆ. ಕಳವಾದ ಚಿನ್ನದ ಮೌಲ್ಯ ಸುಮಾರು ₹40 ಸಾವಿರ ಎಂದು ಅಂದಾಜಿಸಲಾಗಿದೆ. ಮನೆಯ ಸೋಫಾದಲ್ಲಿದ್ದ ಡಬ್ಬದಲ್ಲಿನ ₹5 ಸಾವಿರ ನಗದನ್ನೂ ಕಳ್ಳರು ಕಳವು ಮಾಡಿದ್ದಾರೆ.

ಮನೆಯ ಮತ್ತೊಂದು ವಾರ್ಡ್‌ರೋಬ್‌ ಬಾಗಿಲು ತೆರೆದು ಬಟ್ಟೆಗಳನ್ನು ಚೆಲ್ಲಾಪಿಲ್ಲಿ ಮಾಡಲಾಗಿದ್ದು, ಮನೆಯ ಹಿಂಬದಿ ವರ್ಕ್ ಏರಿಯಾದಲ್ಲಿದ್ದ ಕಬ್ಬಿಣದ ಬಾಗಿಲಿನ ಬೀಗವನ್ನು ಮುರಿದು, ಬಳಿಕ ಹಿಂಬದಿ ಅಳವಡಿಸಿದ್ದ ಮರದ ಬಾಗಿಲನ್ನು ಮುರಿದು ಕಳ್ಳರು ಮನೆಯೊಳಗೆ ಪ್ರವೇಶಿಸಿರುವ ಶಂಕೆ ವ್ಯಕ್ತವಾಗಿದೆ.

ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!