ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ಹಾಗೂ ನಗದು ಕಳವು ಮಾಡಿರುವ ಘಟನೆ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದಲ್ಲಿ ನಡೆದಿದೆ.
ಸಜೀಪಮುನ್ನೂರು ಗ್ರಾಮದ ಪ್ರಪುಲ್ಲಾ ಜಾನೆಟ್ ಡಿಕ್ರೂಸ್ ಅವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಸೆ.14ರಂದು ಸಂಜೆ ಅವರು ಮಕ್ಕಳೊಂದಿಗೆ ಬೆಳ್ಳಾರೆಗೆ ತೆರಳಿದ್ದರು. ಸೆ.15ರಂದು ಬೆಳಗ್ಗೆ ಮನೆಗೆ ವಾಪಸಾದಾಗ ಬೆಡ್‌ರೂಮ್‌ನ ಮಂಚದ ಮೇಲಿದ್ದ ಬೆಡ್ ಅನ್ನು ಸರಿಸಿರುವುದು ಕಂಡುಬಂದಿದೆ.
ವಾರ್ಡ್‌ರೋಬ್ ಬಾಗಿಲು ತೆರೆದು ಬಟ್ಟೆಗಳನ್ನು ಚೆಲ್ಲಾಪಿಲ್ಲಿ ಮಾಡಲಾಗಿದ್ದು, ಪರಿಶೀಲಿಸಿದಾಗ ಸುಮಾರು 4 ಗ್ರಾಂ ತೂಕದ ಎರಡು ಜತೆ ಚಿನ್ನದ ಕಿವಿಯೋಲೆಗಳು ಕಳವಾಗಿರುವುದು ಬೆಳಕಿಗೆ ಬಂದಿದೆ. ಕಳವಾದ ಚಿನ್ನದ ಮೌಲ್ಯ ಸುಮಾರು ₹40 ಸಾವಿರ ಎಂದು ಅಂದಾಜಿಸಲಾಗಿದೆ. ಮನೆಯ ಸೋಫಾದಲ್ಲಿದ್ದ ಡಬ್ಬದಲ್ಲಿನ ₹5 ಸಾವಿರ ನಗದನ್ನೂ ಕಳ್ಳರು ಕಳವು ಮಾಡಿದ್ದಾರೆ.
ಮನೆಯ ಮತ್ತೊಂದು ವಾರ್ಡ್‌ರೋಬ್ ಬಾಗಿಲು ತೆರೆದು ಬಟ್ಟೆಗಳನ್ನು ಚೆಲ್ಲಾಪಿಲ್ಲಿ ಮಾಡಲಾಗಿದ್ದು, ಮನೆಯ ಹಿಂಬದಿ ವರ್ಕ್ ಏರಿಯಾದಲ್ಲಿದ್ದ ಕಬ್ಬಿಣದ ಬಾಗಿಲಿನ ಬೀಗವನ್ನು ಮುರಿದು, ಬಳಿಕ ಹಿಂಬದಿ ಅಳವಡಿಸಿದ್ದ ಮರದ ಬಾಗಿಲನ್ನು ಮುರಿದು ಕಳ್ಳರು ಮನೆಯೊಳಗೆ ಪ್ರವೇಶಿಸಿರುವ ಶಂಕೆ ವ್ಯಕ್ತವಾಗಿದೆ.
ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…