ಕರಾವಳಿ

ಬಂಟ್ವಾಳ: ಕಂಬಗಳಿವೆ, ದೀಪಗಳಿಲ್ಲ; ಬಿ.ಸಿ.ರೋಡ್–ಅಡ್ಡಹೊಳೆ ಹೆದ್ದಾರಿ ರಾತ್ರಿ ಕತ್ತಲು…!

ಬಿ.ಸಿ.ರೋಡ್‌ನಿಂದ ಅಡ್ಡಹೊಳೆವರೆಗೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ ಭಾಗವಾಗಿ ರಸ್ತೆ ಬದಿಯಲ್ಲಿ ಬೀದಿ ದೀಪಗಳ ಕಂಬ ಹಾಗೂ ವಿದ್ಯುತ್ ವ್ಯವಸ್ಥೆ ಅಳವಡಿಸಲಾಗಿದ್ದರೂ, ದೀಪಗಳು ಮಾತ್ರ ಸಮರ್ಪಕವಾಗಿ ಬೆಳಗುತ್ತಿಲ್ಲ. ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ವ್ಯವಸ್ಥೆ ಕಲ್ಪಿಸಲಾಗಿದ್ದರೂ, ಹೆದ್ದಾರಿಯ ಬಹುತೇಕ ಭಾಗ ರಾತ್ರಿ ವೇಳೆ ಕತ್ತಲೆಯಲ್ಲೇ ಉಳಿಯುವಂತಾಗಿದೆ.

ಸುಮಾರು ಆರು ತಿಂಗಳ ಹಿಂದೆ ದೀಪಗಳನ್ನು ಪ್ರಾಯೋಗಿಕವಾಗಿ ಬೆಳಗಿಸಲಾಗಿತ್ತು. ಈ ವೇಳೆ ರಾತ್ರಿ ಹೆದ್ದಾರಿ ಬೆಳಕಿನಿಂದ ಕಂಗೊಳಿಸಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂಬ ನಿರೀಕ್ಷೆ ಮೂಡಿಸಿತ್ತು. ಆದರೆ ಕೆಲವೇ ದಿನಗಳಲ್ಲಿ ಪ್ರಾಯೋಗಿಕ ಬೆಳಕಿನ ವ್ಯವಸ್ಥೆ ಸ್ಥಗಿತಗೊಂಡಿದ್ದು, ಬಳಿಕ ದೀಪಗಳು ನಿರಂತರವಾಗಿ ಉರಿಯದ ಪರಿಸ್ಥಿತಿ ನಿರ್ಮಾಣವಾಗಿದೆ.

ರಸ್ತೆ ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಿರುವ ಕೆಎನ್‌ಆರ್‌ಸಿ ಕಂಪೆನಿ ಪ್ರಾಯೋಗಿಕ ಚಾಲನೆಯ ಸಂದರ್ಭದಲ್ಲಿ ಜನರೇಟರ್ ಬಳಸಿ ಹೆದ್ದಾರಿಯಲ್ಲಿ ಬೆಳಕಿನ ವ್ಯವಸ್ಥೆ ಮಾಡಿತ್ತು. ಒಂದು ದಿನ ದೀಪಗಳು ಬೆಳಗುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದಿತ್ತು. ಇದರಿಂದ ಶೀಘ್ರದಲ್ಲೇ ಶಾಶ್ವತ ವಿದ್ಯುತ್ ಸಂಪರ್ಕ ಕಲ್ಪಿಸಿ ದೀಪಗಳನ್ನು ನಿರಂತರವಾಗಿ ಕಾರ್ಯನಿರ್ವಹಿಸುವಂತೆ ಮಾಡಲಾಗುತ್ತದೆ ಎಂಬ ನಿರೀಕ್ಷೆ ಮೂಡಿತ್ತು.

ಆದರೆ ಪ್ರಾಯೋಗಿಕ ಚಾಲನೆಯಾಗಿ ತಿಂಗಳುಗಳು ಕಳೆದರೂ ಶಾಶ್ವತ ವಿದ್ಯುತ್ ಸಂಪರ್ಕದ ಮೂಲಕ ದೀಪಗಳನ್ನು ನಿರಂತರವಾಗಿ ಉರಿಸುವ ವ್ಯವಸ್ಥೆ ಜಾರಿಗೆ ಬಂದಿಲ್ಲ. ಪರಿಣಾಮವಾಗಿ ರಸ್ತೆಯುದ್ದಕ್ಕೂ ದೀಪದ ಕಂಬಗಳು ನಿಂತಿದ್ದರೂ, ರಾತ್ರಿ ವೇಳೆ ಅವುಗಳಿಂದ ಬೆಳಕು ಕಾಣದ ಸ್ಥಿತಿ ಮುಂದುವರಿದಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…

15 hours ago

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…

15 hours ago

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…

15 hours ago

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…

15 hours ago

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…

15 hours ago

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…

6 days ago