ಕೆಲಸಕ್ಕೆಂದು ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಕಬ್ಬಿಣದ ರಾಡ್ ತೋರಿಸಿ ಮೊಬೈಲ್ ಕಸಿದುಕೊಂಡ ಆರೋಪದ ಘಟನೆ ಪಣಂಬೂರಿನಲ್ಲಿ ನಡೆದಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
2020ರ ನವೆಂಬರ್ 16ರಂದು ಬೆಳಿಗ್ಗೆ ಸುಮಾರು 7 ಗಂಟೆಗೆ ಬಿಹಾರದ ಭಾಗಲ್ಪುರ ಜಿಲ್ಲೆಯ ಅಸತೋಲ್ ಗ್ರಾಮದ ಗೋವಿಂದ್ ಕುಮಾರ್ ಎಂಬವರು ಮನೆಯಿಂದ ಕೆಲಸಕ್ಕೆಂದು ಹೊರಟಿದ್ದರು. ಪಣಂಬೂರು ದೀಪಕ್ ಪೆಟ್ರೋಲ್ ಬಂಕ್ ಹಿಂಭಾಗದಿಂದ ಎನ್‌ಎಂಪಿಎ ಮುಖ್ಯ ಆಡಳಿತ ಕಚೇರಿಯ ಕಡೆಗೆ ತೆರಳುವ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಸ್ಕೂಟರ್‌ನಲ್ಲಿ ಬಂದ ಇಬ್ಬರು ಅವರನ್ನು ಅಡ್ಡಗಟ್ಟಿ ತಡೆದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಪೋರ್ಕೋಡಿಯ ಜಾವೀದ್ ಆಖ್ತರ್ ಅಲಿಯಾಸ್ ಅಖ್ತರ್ ಹಾಗೂ ಕೆಂಜಾರು ಗ್ರಾಮದ ತೋಯಿದ್ ಖಾದರ್ ಯಾನೆ ತೋಯಿ ಅವರು ಕಬ್ಬಿಣದ ರಾಡ್ ತೋರಿಸಿ ಬೆದರಿಸಿ, ಸುಮಾರು ₹5,000 ಮೌಲ್ಯದ ಮೊಬೈಲ್ ಫೋನ್ ಕಸಿದುಕೊಂಡು ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಗೋವಿಂದ್ ಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…