ಸುಮಾರು 10 ತಿಂಗಳ ಹಿಂದೆ ನಡೆದ ಮಣಿಪಾಲದ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕಿರುಕುಳ ನೀಡಿದ ಆರೋಪದಡಿ ಯುವಕನೋರ್ವನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ದಿಯು-ದಮನ್ ಕೇಂದ್ರಾಡಳಿತ ಪ್ರದೇಶದ ಸಾಯಿ ಸಂಜಯ್ ಬಿಂಗಾರೆ (21) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಮಣಿಪಾಲದ ಹೋಟೆಲ್ ಮ್ಯಾನೇಜ್‌ಮೆಂಟ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಸ್ಸಾಂ ಮೂಲದ ಲೆಸ್ಲಿ ಜೋಸೆಫ್ ಮ್ಯಾಥ್ಯೂ ಅವರ ಪುತ್ರಿ ಪೌಲಾ ಲೆಸ್ಲಿ ವಾಜ್ರಿರ್ ಅವರು 2025ರ ನವೆಂಬರ್ 7ರಂದು ರಾತ್ರಿ ಮಣಿಪಾಲದ ಕಾಯಿನ್ ಸರ್ಕಲ್ ಬಳಿಯ ತಮ್ಮ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಈ ಕುರಿತು ನ್ಯಾಯಾಲಯದ ಖಾಸಗಿ ದೂರಿನ ಆಧಾರದ ಮೇಲೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಅಂತಿಮ ವರದಿ ಸಲ್ಲಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿದ್ದರು. ಬಳಿಕ ಪೊಲೀಸರು ವಶಪಡಿಸಿಕೊಂಡಿದ್ದ ಮೃತರ ಮೊಬೈಲ್ ಫೋನ್, ಡೈರಿ ಹಾಗೂ ಡಿಜಿಟಲ್ ದಾಖಲೆಗಳನ್ನು ತಂದೆ ಲೆಸ್ಲಿ ಜೋಸೆಫ್ ಮ್ಯಾಥ್ಯೂ ಅವರ ವಶಕ್ಕೆ ನೀಡಲಾಗಿತ್ತು.
ದಾಖಲೆಗಳನ್ನು ಪರಿಶೀಲಿಸಿದ ವೇಳೆ ಸಾಯಿ ಸಂಜಯ್ ಬಿಂಗಾರೆ ಅವರೊಂದಿಗೆ ಸ್ನ್ಯಾಪ್‌ಚಾಟ್ ಮೂಲಕ ನಡೆದಿದ್ದ ಸಂವಹನದ ದಾಖಲೆಗಳು ಪತ್ತೆಯಾಗಿದ್ದವು ಎಂದು ದೂರಿನಲ್ಲಿ ತಿಳಿಸಲಾಗಿದೆ. ಸಾಯಿ ಸಂಜಯ್ ಅವರು ಪೌಲಾ ಲೆಸ್ಲಿ ವಾಜ್ರಿರ್ ಅವರಿಗೆ ಆತ್ಮಹತ್ಯೆಗೆ ಪ್ರೇರಣೆ ನೀಡುವ ರೀತಿಯಲ್ಲಿ ನಿರಂತರ ಕಿರುಕುಳ, ಬಲವಂತ ಅಥವಾ ಬ್ಲ್ಯಾಕ್‌ಮೇಲ್ ಮಾಡಿರುವ ಸಾಧ್ಯತೆ ಇದೆ ಎಂದು ಆರೋಪಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ತಂದೆ ದೂರು ನೀಡಿದ್ದರು.
ಈ ದೂರಿನ ಆಧಾರದ ಮೇಲೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರ ಸೂಚನೆಯಂತೆ ಠಾಣೆಯ ಎಸ್ಸೈ ತಿಮ್ಮೇಶ್ ಬಿ.ಎನ್. ತನಿಖೆ ಕೈಗೊಂಡು ಸೆ.9ರಂದು ಸಾಯಿ ಸಂಜಯ್ ಬಿಂಗಾರೆ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…