ಚಲನಚಿತ್ರ

ಬೆಂಗಳೂರು: ಅನಂತ್ ನಾಗ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಹೆಮ್ಮೆಯ ಗರಿ

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಿಸಲಾಗಿದೆ. ಭಾರತೀಯ ಚಿತ್ರರಂಗಕ್ಕೆ ನೀಡಿರುವ ಕೊಡುಗೆ ಹಾಗೂ ಐದು ದಶಕಗಳಿಗೂ ಹೆಚ್ಚು ಕಾಲದ ಸುದೀರ್ಘ ಚಲನಚಿತ್ರ ಪಯಣವನ್ನು ಗುರುತಿಸಿ ಕೇಂದ್ರ ಸರ್ಕಾರ ಈ ಗೌರವವನ್ನು ನೀಡುತ್ತಿದೆ ಎಂದು ಪತ್ರಿಕಾ ಮಾಹಿತಿ ಕಾರ್ಯಾಲಯ (PIB) ಸೆ.16ರಂದು ಪ್ರಕಟಿಸಿದೆ.

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಆಯ್ಕೆ ಸಮಿತಿಯ ಶಿಫಾರಸಿನ ಮೇರೆಗೆ ಕೇಂದ್ರ ಸರ್ಕಾರ ಈ ಪ್ರಶಸ್ತಿಯನ್ನು ಘೋಷಿಸಿದೆ. ಅನಂತ್ ನಾಗ್ ಅವರ ಸುದೀರ್ಘ ಚಿತ್ರಪಯಣ ಹಲವು ತಲೆಮಾರುಗಳ ಕಲಾವಿದರು ಹಾಗೂ ಚಿತ್ರಪ್ರೇಮಿಗಳಿಗೆ ಸ್ಫೂರ್ತಿಯಾಗಿದೆ ಎಂದು ಸರ್ಕಾರ ತಿಳಿಸಿದೆ. ಸೆ.22ರಂದು ಗುಜರಾತ್‌ನ ಕೆವಾಡಿಯಾದಲ್ಲಿ ನಡೆಯಲಿರುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

1973ರಲ್ಲಿ ಬಿಡುಗಡೆಯಾದ ‘ಸಂಕಲ್ಪ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಅನಂತ್ ನಾಗ್, ಕನ್ನಡ ಸೇರಿದಂತೆ ಹಿಂದಿ, ತೆಲುಗು, ತಮಿಳು, ಮಲಯಾಳಂ ಸೇರಿದಂತೆ ವಿವಿಧ ಭಾಷೆಗಳ ಚಿತ್ರಗಳಲ್ಲಿ ನಟಿಸಿದ್ದಾರೆ. ಐದು ದಶಕಗಳಿಗೂ ಹೆಚ್ಚು ಕಾಲದ ಸಿನಿಪಯಣದಲ್ಲಿ 300ಕ್ಕೂ ಅಧಿಕ ಚಿತ್ರಗಳಲ್ಲಿ ಅಭಿನಯಿಸಿರುವ ಅವರು, ಸಹಜ ಹಾಗೂ ವೈವಿಧ್ಯಮಯ ಅಭಿನಯದ ಮೂಲಕ ತಮ್ಮದೇ ಛಾಪು ಮೂಡಿಸಿದ್ದಾರೆ.

‘ಸಂಕಲ್ಪ’, ‘ಹಂಸಗೀತೆ’, ‘ಮಿಂಚಿನ ಓಟ’, ‘ನಾ ನಿನ್ನ ಬಿಡಲಾರೆ’, ‘ಚಂದನದ ಗೊಂಬೆ’, ‘ಗಣೇಶನ ಮದುವೆ’, ‘ಗೌರಿ ಗಣೇಶ’ ಸೇರಿದಂತೆ ಹಲವು ಜನಪ್ರಿಯ ಚಿತ್ರಗಳಲ್ಲಿ ಅನಂತ್ ನಾಗ್ ಅಭಿನಯಿಸಿದ್ದಾರೆ. ಇತ್ತೀಚಿನ ವರ್ಷಗಳಲ್ಲೂ ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’, ‘ಕೆಜಿಎಫ್’ ಹಾಗೂ ‘ಗಾಳಿಪಟ 2’ ಸೇರಿದಂತೆ ಹಲವು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಅನಂತ್ ನಾಗ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆಯಾಗಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ತಿಳಿಸಿದ್ದಾರೆ. ಹಲವು ದಶಕಗಳ ಅವರ ಸಹಜ ಅಭಿನಯ, ವೈವಿಧ್ಯಮಯ ಪ್ರತಿಭೆ ಮತ್ತು ಕಲಾತ್ಮಕ ಸಾಧನೆ ಭಾರತೀಯ, ವಿಶೇಷವಾಗಿ ಕನ್ನಡ ಚಿತ್ರರಂಗದ ಮೇಲೆ ಅಚ್ಚಳಿಯದ ಗುರುತು ಮೂಡಿಸಿದೆ ಎಂದು ಪ್ರಧಾನಿ ಹೇಳಿದ್ದಾರೆ.

ಕರ್ನಾಟಕದಿಂದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದವರ ಪೈಕಿ ಡಾ. ರಾಜ್‌ಕುಮಾರ್ ಅವರಿಗೆ 1995ರಲ್ಲಿ ಈ ಗೌರವ ಲಭಿಸಿತ್ತು. ಅನಂತ್ ನಾಗ್ ಅವರಿಗೆ ಪ್ರಶಸ್ತಿ ಘೋಷಣೆಯಾಗಿರುವುದು ಕನ್ನಡ ಚಿತ್ರರಂಗದ ಪಾಲಿಗೆ ಮತ್ತೊಂದು ಮಹತ್ವದ ಗೌರವವಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…

11 hours ago

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…

12 hours ago

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…

12 hours ago

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…

12 hours ago

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…

12 hours ago

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…

12 hours ago