ತುಳುನಾಡಿನ ಬಹುದಿನಗಳ ಬೇಡಿಕೆಯಂತೆ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಿದೆ ಎಂದು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಖಾತೆ ಸಚಿವ ಯು.ಟಿ. ಖಾದರ್ ಹೇಳಿದರು.
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಸಮಸ್ಯೆಗಳಿಗೆ ಬೆಂಗಳೂರಿನಿಂದಲೇ ಪರಿಹಾರ ಕಂಡುಕೊಳ್ಳುವ ಬದಲು ಸಚಿವ ಸಂಪುಟವೇ ಮಂಗಳೂರಿನಲ್ಲಿ ಸಭೆ ನಡೆಸುತ್ತಿರುವುದರಿಂದ ಸ್ಥಳೀಯ ಸಮಸ್ಯೆಗಳನ್ನು ಅಧಿಕಾರಿಗಳು ನೇರವಾಗಿ ಸರ್ಕಾರದ ಗಮನಕ್ಕೆ ತರಲು ಸಾಧ್ಯವಾಗಲಿದೆ ಎಂದರು. ಜಿಲ್ಲೆಗೆ ಅಗತ್ಯವಿರುವ ಅಭಿವೃದ್ಧಿ ಯೋಜನೆಗಳು ಹಾಗೂ ಜನರ ಬೇಡಿಕೆಗಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಕಾನೂನಿನ ವ್ಯಾಪ್ತಿಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ಬೆಂಗಳೂರು ಹೊರತುಪಡಿಸಿ ಬೇರೆ ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ನಡೆಸುವುದಾದರೆ ಮಂಗಳೂರಿನಲ್ಲೇ ನಡೆಸಬೇಕು ಎಂದು ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಮುಖ್ಯಮಂತ್ರಿಗಳು, ಮಂಗಳೂರಿನ ಮಾನವ ಸಂಪನ್ಮೂಲ, ಪ್ರವಾಸೋದ್ಯಮ, ಆರೋಗ್ಯ, ಶಿಕ್ಷಣ, ಸಾರಿಗೆ, ಸಂಪರ್ಕ ವ್ಯವಸ್ಥೆ ಹಾಗೂ ಧಾರ್ಮಿಕ ಕ್ಷೇತ್ರಗಳ ಸಾಮರ್ಥ್ಯ ಪರಿಗಣಿಸಿ ಕರಾವಳಿಗೆ ಹೆಚ್ಚಿನ ಮಹತ್ವ ನೀಡುವ ಭರವಸೆ ನೀಡಿದ್ದರು. ಅದರಂತೆ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿರುವುದು ಸಂತಸದ ವಿಚಾರವಾಗಿದೆ ಎಂದು ಖಾದರ್ ಹೇಳಿದರು.
ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಸಚಿವ ಸಂಪುಟದ ಸದಸ್ಯರು ಮಂಗಳೂರಿಗೆ ಆಗಮಿಸುವ ಸಂದರ್ಭದಲ್ಲಿ ಪಂಪ್‌ವೆಲ್‌ನಿಂದ ಭವ್ಯ ಸ್ವಾಗತ ನೀಡಲು ತುಳುನಾಡಿನ ಜನತೆ ಮುಂದಾಗಬೇಕು. ಕರಾವಳಿಯ ಆತಿಥ್ಯ, ಪ್ರೀತಿ ಮತ್ತು ವಿಶ್ವಾಸವನ್ನು ಇಡೀ ರಾಜ್ಯಕ್ಕೆ ಪರಿಚಯಿಸುವ ಅವಕಾಶ ಇದಾಗಿದೆ. ಎಲ್ಲ ಸಂಘ-ಸಂಸ್ಥೆಗಳು, ಜಾತಿ, ವರ್ಗ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಪಕ್ಷಭೇದ ಮರೆತು ಸ್ವಾಗತ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಹಾಗೂ ಕಾಂಗ್ರೆಸ್ ಮುಖಂಡ ಮಿಥುನ್ ರೈ ಉಪಸ್ಥಿತರಿದ್ದರು.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…