ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಹಿರಿಯ ಕಾಂಗ್ರೆಸ್ ನಾಯಕ ಬಿ. ಜನಾರ್ದನ ಪೂಜಾರಿ ನಿವಾಸಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಭೇಟಿ

ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ. ಜನಾರ್ದನ ಪೂಜಾರಿ ಅವರ ಬಂಟ್ವಾಳ ನಿವಾಸಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾತ್ರಿ ಭೇಟಿ ನೀಡಿ, ಆರೋಗ್ಯ ವಿಚಾರಿಸಿ ಆಶೀರ್ವಾದ ಪಡೆದರು.

ಬೆಂಗಳೂರಿಗೆ ತೆರಳುವ ಮುನ್ನ ತಮ್ಮ ಬ್ಯುಸಿ ಕಾರ್ಯಕ್ರಮಗಳ ನಡುವೆಯೂ ಸಮಯ ಹೊಂದಿಸಿಕೊಂಡು ಪೂಜಾರಿ ಅವರ ನಿವಾಸಕ್ಕೆ ತೆರಳಿದ ಸಿಎಂ, ಸುಮಾರು 10 ನಿಮಿಷಗಳ ಕಾಲ ಅವರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಪೂಜಾರಿ ಅವರ ಆರೋಗ್ಯ ಹಾಗೂ ವಿವಿಧ ವಿಚಾರಗಳ ಕುರಿತು ವಿಚಾರಿಸಿದರು.

ಕಳೆದ ಫೆಬ್ರವರಿಯಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿಯೂ ಡಿ.ಕೆ. ಶಿವಕುಮಾರ್ ಅವರು ಬಿ. ಜನಾರ್ದನ ಪೂಜಾರಿ ಅವರನ್ನು ಭೇಟಿಯಾಗಿದ್ದರು. ಆ ಸಂದರ್ಭದಲ್ಲಿ ಪೂಜಾರಿ ಅವರು ಉತ್ತಮವಾಗಿ ಕೆಲಸ ಮಾಡಿ ನಾಡಿಗೆ ಕೀರ್ತಿ ತರುವಂತೆ ಹಾರೈಸಿದ್ದರು ಎನ್ನಲಾಗಿದೆ.

 

ಅಲ್ಲದೆ, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಏರುವಂತೆಯೂ ಪೂಜಾರಿ ಅವರು ಹಾರೈಸಿದ್ದರು ಎಂದು ತಿಳಿದುಬಂದಿದೆ. ಇದೀಗ ಮುಖ್ಯಮಂತ್ರಿ ಸ್ಥಾನದಲ್ಲಿರುವ ಸಂದರ್ಭದಲ್ಲಿ ಮತ್ತೆ ಪೂಜಾರಿ ಅವರನ್ನು ಭೇಟಿಯಾಗುವ ಮೂಲಕ ಡಿ.ಕೆ. ಶಿವಕುಮಾರ್ ಅವರು ಹಿಂದಿನ ಭೇಟಿಯ ನೆನಪನ್ನು ಮೆಲುಕು ಹಾಕಿದರು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!