ಜನ ಮನದ ನಾಡಿ ಮಿಡಿತ

Advertisement

ನಾಲ್ಕು ಅಂತಸ್ತಿನ ಕಟ್ಟಡದಿಂದ ಕುಸಿದು ಬಿದ್ದ ನೀರಿನ ಟ್ಯಾಂಕ್: ಇಬ್ಬರು ದಾರುಣ ಸಾವು

ಬೆಂಗಳೂರು : ನೀರಿನ ಟ್ಯಾಂಕ್ ಒಂದು ನಾಲ್ಕು ಅಂತಸ್ತಿನ ಕಟ್ಟಡದ ಮೇಲಿದ್ದ ಕುಸಿದು ಬಿದ್ದು ಫಾಸ್ಟ್ ಫುಡ್ ಅಂಗಡಿ ಮಾಲೀಕ ಹಾಗೂ ಗ್ರಾಹಕ ಸಾವನ್ನಪ್ಪಿರುವ ಘಟನೆ ತಡರಾತ್ರಿ ರಾಜಧಾನಿಯ ಶಿವಾಜಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದರೆ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೃತರಲ್ಲಿ ಒಬ್ಬ ಅರುಳ್ (40) ಹಾಗೂ ಮತ್ತೊಬ್ಬನ ಗುರುತು ಇನ್ನೂ ಪತ್ತೆಯಾಗಿಲ್ಲ. ನಾಲ್ಕು ಅಂತಸ್ತಿನ ಕಟ್ಟಡದ ಮೇಲೆ ವಾಟರ್ ಟ್ಯಾಂಕ್ (ಸಿಂಟ್ಯಾಕ್ಸ್) ಇತ್ತು. ಅದೇ ಕಟ್ಟಡದ ಕೆಳಗಡೆ ತಳ್ಳುವ ಗಾಡಿಯಲ್ಲಿ ಫಾಸ್ಟ್ ಫುಡ್ ಅಂಗಡಿ ಇತ್ತು. ನೀರು ತುಂಬಿದ್ದ ಟ್ಯಾಂಕಿನಿಂದ ಕಟ್ಟಡದ ಗೋಡೆ ದುರ್ಬಲಗೊಂಡಿದೆ. ಆದ್ದರಿಂದ ಟ್ಯಾಂಕ್ ಜೊತೆಗೆ ಗೋಡೆಯೂ ನೆಲಕ್ಕೆ ಕುಸಿದು ಬಿದ್ದಿವೆ. ಪರಿಣಾಮ ಅಂಗಡಿ ಮಾಲೀಕ ಹಾಗೂ ಒಬ್ಬ ಗ್ರಾಹಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಗ್ರಾಹಕರು ಗಂಭೀರವಾಗಿ ಗಾಯಗೊಂಡಿದ್ದು, ನಗರದ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಶಿವಾಜಿನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!