ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಸ್ವಚ್ಛ ಭಾರತ್ ಮಿಷನ್ ದಕ್ಷಿಣ ಕನ್ನಡ ಹಾಗೂ ಹಸಿರು ದಳ ಮಂಗಳೂರು ಇವರ ವತಿಯಿಂದ ಆಯೋಜಿಸಿರುವ ‘10 ದಿನ, 10 ಪಂಚಾಯತ್ಗಳಲ್ಲಿ ಪ್ಲಾಸ್ಟಿಕ್ನಿಂದ ಸ್ವಾತಂತ್ರ್ಯ’ ಕಾರ್ಯಕ್ರಮದ ಅಂಗವಾಗಿ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು.

ಈ ಸಂದರ್ಭದಲ್ಲಿ ಹಸಿರು ದಳ ಮಂಗಳೂರಿನ ಮುಖ್ಯಸ್ಥ ನಾಗರಾಜ್ ಬಜಾಲ್ ಮಾತನಾಡಿ, ಆಯ್ಕೆ ಮಾಡಿರುವ 10 ಗ್ರಾಮ ಪಂಚಾಯತ್ಗಳ ವ್ಯಾಪ್ತಿಯಲ್ಲಿ ಶೂನ್ಯ ತ್ಯಾಜ್ಯ ಪಂಚಾಯತ್ ನಿರ್ಮಿಸುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದರು. ಬಳಸಿ ಬಿಸಾಡುವ ಬಟ್ಟೆಗಳಿಂದ ಚೀಲಗಳನ್ನು ತಯಾರಿಸಿ ಸಾರ್ವಜನಿಕರಿಗೆ ವಿತರಿಸುವ ಮೂಲಕ ಪ್ಲಾಸ್ಟಿಕ್ ಬಳಕೆಯಿಂದ ಮುಕ್ತಿ ಪಡೆಯುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಫರಂಗಿಪೇಟೆ ಬಸ್ ನಿಲ್ದಾಣದ ಬಳಿ ಸಾರ್ವಜನಿಕರಿಗೆ ಬಟ್ಟೆಯ ಚೀಲಗಳನ್ನು ಉಚಿತವಾಗಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಉಮ್ಮರ್ ಫಾರೂಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.



