ಪೆರ್ನೆ ಮೈರಕಟ್ಟೆಯಲ್ಲಿ ಕುಡಿಯುವ ನೀರಿನ ಬಾವಿಗೆ ಆಕಸ್ಮಿಕವಾಗಿ ಬಿದ್ದು ಎರಡು ವರ್ಷದ ಗಂಡು ಮಗು ಮೃತಪಟ್ಟಿದ್ದು, ಮತ್ತೊಂದು ನಾಲ್ಕು ವರ್ಷದ ಮಗು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.
ಮೃತ ಮಗುವನ್ನು ರಬೀಹ್ ಎಂದು ಗುರುತಿಸಲಾಗಿದ್ದು, ಗಾಯಗೊಂಡಿರುವ ಆಲಿಯಾ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳು ಬಾವಿಯ ಸಮೀಪದಲ್ಲಿದ್ದ ವೇಳೆ ಆಲಿಯಾ ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದಾರೆ ಎನ್ನಲಾಗಿದೆ. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ರಕ್ಷಿಸಿ ಅವರನ್ನು ಮೇಲಕ್ಕೆ ಕರೆತಂದಿದ್ದಾರೆ.
ಬಳಿಕ ಮತ್ತೊಂದು ಮಗು ಕೂಡ ಬಾವಿಗೆ ಬಿದ್ದಿರುವುದಾಗಿ ಆಲಿಯಾ ಮಾಹಿತಿ ನೀಡಿದ್ದು, ಸ್ಥಳೀಯರು ಪರಿಶೀಲಿಸಿದಾಗ ರಬೀಹ್ ಬಾವಿಯಲ್ಲಿ ಬಿದ್ದಿರುವುದು ಗೊತ್ತಾಗಿದೆ. ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಿ ರಬೀಹ್ ಅವರನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ತನಿಖೆಯಿಂದ ತಿಳಿದುಬರಬೇಕಿದೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…