ಕೇರಳದ ಇಡುಕ್ಕಿ ಜಿಲ್ಲೆಯ ವಟ್ಟವಡದ ಕೊಟ್ಟಕ್ಕಾಂಬೂರ್‌ನಲ್ಲಿ ಭಾರಿ ಮಳೆಯಿಂದ ಮಣ್ಣು ಕುಸಿದು ಇಬ್ಬರು ಮೃತಪಟ್ಟಿದ್ದು, ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಭಾನುವಾರ ಮಧ್ಯಾಹ್ನ ಸುಮಾರು ಮೂರು ಗಂಟೆಗಳ ಕಾಲ ಸುರಿದ ಭಾರಿ ಮಳೆಯ ಬಳಿಕ ಕೃಷಿ ಪ್ರದೇಶದ ಸಮೀಪದ ಶೆಡ್ ಮೇಲೆ ಏಕಾಏಕಿ ಮಣ್ಣು ಕುಸಿದು ಬಿದ್ದಿದೆ. ಈ ವೇಳೆ ಮಳೆಯಿಂದಾಗಿ ಶೆಡ್‌ನಲ್ಲಿ ಆಶ್ರಯ ಪಡೆದಿದ್ದ ಬಾಲಕೃಷ್ಣನ್ ಹಾಗೂ ಅವರ ಸಹೋದರಿ ಚಿನ್ನು ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ.
ಬಾಲಕೃಷ್ಣನ್ ಅವರ ಪತ್ನಿ ಮರಿಯಮ್ಮ ಮಣ್ಣಿನಡಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ ಮಣ್ಣಿನಡಿ ಸಿಲುಕಿದ್ದವರನ್ನು ಹೊರತೆಗೆದಿದ್ದಾರೆ.
ಭೂಕುಸಿತದ ಪರಿಣಾಮ ವಿದ್ಯುತ್ ತಂತಿಗಳು ತುಂಡಾಗಿ ಬಿದ್ದಿದ್ದು, ವಿದ್ಯುತ್ ಶಾಕ್‌ನ ಅಪಾಯವೂ ಎದುರಾಗಿತ್ತು ಎಂದು ವರದಿಯಾಗಿದೆ. ಘಟನೆಯ ಬಳಿಕ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಇದೇ ವೇಳೆ ಕೇರಳದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭೂಕುಸಿತ ಹಾಗೂ ಪ್ರವಾಹದ ಆತಂಕ ಎದುರಾಗಿದೆ. ಇಡುಕ್ಕಿ, ಕೋಟಯಂ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಗುಡ್ಡ ಪ್ರದೇಶ ಹಾಗೂ ನದಿ ತೀರದ ನಿವಾಸಿಗಳು ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…