ಜನ ಮನದ ನಾಡಿ ಮಿಡಿತ

Advertisement

ಕಡಬ: ನೆಲ್ಯಾಡಿಯಲ್ಲಿ ಸರಣಿ ಅಪಘಾತ; ಮೂರು ವಾಹನಗಳು ಜಖಂ…!

ತಾಲೂಕಿನ ನೆಲ್ಯಾಡಿ ಗ್ರಾಮದ ಬೆಥನಿ ಕಾಲೇಜು ಬಳಿ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಲಾರಿಯೊಂದು ಮತ್ತೊಂದು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು, ಬಳಿಕ ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ಗ್ಯಾಸ್ ಟ್ಯಾಂಕರ್‌ಗೆ ಉಜ್ಜಿಕೊಂಡು ಪಲ್ಟಿಯಾದ ಘಟನೆ ನಡೆದಿದೆ.

ಸಕಲೇಶಪುರ ಕಡೆಯಿಂದ ಮಂಗಳೂರು ಕಡೆಗೆ ಲಾರಿಯನ್ನು ಶಮೀರ್ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ವೇಳೆ, ಮದ್ಯದ ಲೋಡ್ ತುಂಬಿಕೊಂಡು ಬರುತ್ತಿದ್ದ ಮತ್ತೊಂದು ಲಾರಿಗೆ ಹಿಂಬದಿಯಿಂದ ರಭಸವಾಗಿ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಲಾರಿ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಗ್ಯಾಸ್ ಟ್ಯಾಂಕರ್‌ಗೆ ಉಜ್ಜಿಕೊಂಡು ರಸ್ತೆಯ ಎಡಬದಿಗೆ ಮಗುಚಿ ಬಿದ್ದಿದೆ.

ಘಟನೆಯಲ್ಲಿ ಮದ್ಯದ ಲೋಡ್ ತುಂಬಿದ್ದ ಲಾರಿ ಸೇರಿದಂತೆ ಮೂರು ವಾಹನಗಳು ಜಖಂಗೊಂಡಿದ್ದು, ಮದ್ಯದ ಲೋಡ್‌ಗೂ ಹಾನಿಯಾಗಿದೆ ಎನ್ನಲಾಗಿದೆ. ಅಪಘಾತದಲ್ಲಿ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಘಟನಾ ಸ್ಥಳಕ್ಕೆ ನೆಲ್ಯಾಡಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾರಿ ಮಾಲೀಕ ರಾಜ ಎಂ. ಅವರು ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!