ತಾಲೂಕಿನ ನೆಲ್ಯಾಡಿ ಗ್ರಾಮದ ಬೆಥನಿ ಕಾಲೇಜು ಬಳಿ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಲಾರಿಯೊಂದು ಮತ್ತೊಂದು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು, ಬಳಿಕ ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ಗ್ಯಾಸ್ ಟ್ಯಾಂಕರ್‌ಗೆ ಉಜ್ಜಿಕೊಂಡು ಪಲ್ಟಿಯಾದ ಘಟನೆ ನಡೆದಿದೆ.
ಸಕಲೇಶಪುರ ಕಡೆಯಿಂದ ಮಂಗಳೂರು ಕಡೆಗೆ ಲಾರಿಯನ್ನು ಶಮೀರ್ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ವೇಳೆ, ಮದ್ಯದ ಲೋಡ್ ತುಂಬಿಕೊಂಡು ಬರುತ್ತಿದ್ದ ಮತ್ತೊಂದು ಲಾರಿಗೆ ಹಿಂಬದಿಯಿಂದ ರಭಸವಾಗಿ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಲಾರಿ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಗ್ಯಾಸ್ ಟ್ಯಾಂಕರ್‌ಗೆ ಉಜ್ಜಿಕೊಂಡು ರಸ್ತೆಯ ಎಡಬದಿಗೆ ಮಗುಚಿ ಬಿದ್ದಿದೆ.
ಘಟನೆಯಲ್ಲಿ ಮದ್ಯದ ಲೋಡ್ ತುಂಬಿದ್ದ ಲಾರಿ ಸೇರಿದಂತೆ ಮೂರು ವಾಹನಗಳು ಜಖಂಗೊಂಡಿದ್ದು, ಮದ್ಯದ ಲೋಡ್‌ಗೂ ಹಾನಿಯಾಗಿದೆ ಎನ್ನಲಾಗಿದೆ. ಅಪಘಾತದಲ್ಲಿ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಘಟನಾ ಸ್ಥಳಕ್ಕೆ ನೆಲ್ಯಾಡಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾರಿ ಮಾಲೀಕ ರಾಜ ಎಂ. ಅವರು ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…