ಮಾಜಿ ಸಚಿವ ಬಿ. ರಮಾನಾಥ್ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ರಮಾನಾಥ್ ರೈ ಅವರು ಗಾಯಗೊಂಡಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರ್ಕಳ ರಾಷ್ಟ್ರೀಯ ಹೆದ್ದಾರಿ-169ರ ಚಿಲಿಂಬಿ ಸಮೀಪ ಈ ಘಟನೆ ನಡೆದಿದೆ. ರಮಾನಾಥ್ ರೈ ಅವರು ಮೂಡುಬಿದಿರೆಯಿಂದ ಕಾರ್ಕಳದತ್ತ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಹಾಗೂ ಅವರ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಕಾರು ನುಜ್ಜುಗುಜ್ಜಾಗಿದ್ದು, ರಮಾನಾಥ್ ರೈ ಅವರ ಕೈ ಹಾಗೂ ಕಾಲಿಗೆ ಗಾಯಗಳಾಗಿವೆ. ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಹಾಗೂ ಮೂಡುಬಿದಿರೆ ಹಿಂದೂ ಜಾಗರಣ ವೇದಿಕೆಯ ಪ್ರಮುಖರಾದ ಜಗದೀಶ್ ಮತ್ತು ಶಿಶಿರ್ ಸ್ಥಳಕ್ಕೆ ಧಾವಿಸಿ, ಕಾರಿನೊಳಗೆ ಸಿಲುಕಿದ್ದ ರಮಾನಾಥ್ ರೈ ಹಾಗೂ ಅವರ ಚಾಲಕನನ್ನು ಹೊರತೆಗೆದಿದ್ದಾರೆ.
ಬಳಿಕ ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ರಮಾನಾಥ್ ರೈ ಹಾಗೂ ಅವರ ಚಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಬ್ಬರೂ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…