ಮರೋಳಿ ಬಳಿ ಟೂರಿಸ್ಟ್ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಸೂರ್ಯ ವುಡ್ಸ್ ತಿರುವಿನಲ್ಲಿ ರಾತ್ರಿ ವೇಳೆ ಈ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿದ್ದ ಗುಂಡಿಯನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದಾಗ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಕಾರಿನೊಳಗೆ ನುಗ್ಗಿದ್ದು, ಕಾರು ಸೀಳಿದಂತಾಗಿದೆ. ಘಟನೆಯ ಪರಿಣಾಮ ಕಾರು ಸಂಪೂರ್ಣವಾಗಿ ಹಾನಿಗೊಳಗಾಗಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…